Breaking News

ಮಣಿಪಾಲ್‌ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್ – ವಿದ್ಯಾರ್ಥಿ ತಲೆಗೆ ಗಂಭೀರ ಗಾಯ

Spread the love

ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ ಬಸ್  ಕಂದಕಕ್ಕೆ ಉರುಳಿ ಬಿದ್ದು, ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಣಿಪಾಲದ ಖಾಸಗಿ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿಗೆ ತಲೆಗೆ ತೀವ್ರ ಪೆಟ್ಟಾಗಿದೆ.

ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿದ್ದಾರೆ. ಘಟನೆ ಕುರಿತು ಮಣಿಪಾಲ್ ಪೊಲೀಸರು ‌ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಸಿಎಂ ಡಿಕೆಶಿ ನನ್ನನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡುವ ನಂಬಿಕೆ ಇದೆ: ಕೆ.ವೈ.ನಂಜೇಗೌಡ

Spread the loveಕೋಲಾರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೊಟ್ಟ ಮಾತಿನಂತೆ ನನಗೆ ಕೆಎಂಎಫ್  ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡುತ್ತಾರೆ ಎಂಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ