Breaking News

ಬುಧವಾರವೂ ಶಾಲೆ, ಕಾಲೇಜುಗಳಿಗೆ ರಜೆ

Spread the love

ಬೆಳಗಾವಿ : ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ 3 ತಾಲೂಕುಗಳ ಶಾಲೆಗಳಿಗೆ ಬುಧವಾರವೂ ರಜೆ ಘೋಷಿಸಲಾಗಿದೆ.

ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ

ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ, ಖಾನಾಪುರ ತಾಲ್ಲೂಕುಗಳ ಮತ್ತು ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಎಲ್ಲ ಅಂಗನವಾಡಿ ಕೇಂದ್ರಗಳು/ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಬುಧವಾರ(ಜುಲೈ 8) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ‌.

ಬೆಳಗಾವಿ, ನಿಪ್ಪಾಣಿ ಹಾಗೂ ಖಾನಾಪುರ ತಾಲ್ಲೂಕುಗಳ ಎಲ್ಲ ಪಿಯುಸಿ ಹಾಗೂ ಸಮವರ್ತಿತ ಕಾಲೇಜುಗಳಿಗೂ ಬುಧವಾರ(ಜುಲೈ 8) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ನೇಪಾಳದಲ್ಲಿ ರಣಭೀಕರ ಪ್ರವಾಹಕ್ಕೆ 8 ಬಲಿ – 32 ಪೊಲೀಸರು ಸೇರಿ ನೂರಾರು ಜನ ನಾಪತ್ತೆ

Spread the loveಕಠ್ಮಂಡು: ನೇಪಾಳದಲ್ಲಿ ಉಂಟಾಗಿರುವ ರಣ ಭೀಕರ ಪ್ರವಾಹದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. 41 ಭದ್ರತಾ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ