Breaking News

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Spread the love

ಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಅಭಾವ  ಶಾಲೆಗಳ ಬಿಸಿಯೂಟ ಯೋಜನೆ ಮೇಲೂ ಪರಿಣಾಮ ಬೀರಿದೆ. ಗ್ಯಾಸ್ ಇಲ್ಲದೇ ಮೂಡಿಗೆರೆ  ತಾಲೂಕಿನ ಕೊಟ್ಟಿಗೆಹಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ (School) ಸಿಬ್ಬಂದಿ ಅಡುಗೆ ಮಾಡಲು ಪರದಾಡಿದ್ದಾರೆ.

ಸಿಲಿಂಡರ್‌ ಸರಬರಾಜಾಗದೇ ಇದ್ದಿದ್ದರಿಂದ ಶಾಲೆಯ ಸಿಬ್ಬಂದಿ ಸೌದೆ ಬಳಸಿ ಬಯಲಲ್ಲಿ ಬಿಸಿಯೂಟ ಸಿದ್ಧಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಶಾಲೆಯ ಸಿಬ್ಬಂದಿ, ಐದು ದಿನಗಳಿಂದ ಗ್ಯಾಸ್ ಇಲ್ಲದೆ ಸೌದೆಯಲ್ಲೇ ಅಡುಗೆ ಮಾಡುತ್ತಿದ್ದೇವೆ. ಶಾಲೆಯಲ್ಲಿ ಸುಮಾರು 60-70 ಜನ ಮಕ್ಕಳಿದ್ದಾರೆ. ಗ್ಯಾಸ್‌ ಇಲ್ಲದೇ ಸೌದೆಯಲ್ಲಿ ಅಷ್ಟು ಜನ ಮಕ್ಕಳಿಗೆ ಅಡುಗೆ ಸಿದ್ಧಪಡಿಸುವುದು ಕಷ್ಟವಾಗುತ್ತಿದೆ ಎಂದಿದ್ದಾರೆ.

ಜಿಲ್ಲಾಧಿಕಾರಿಗಳ ಸೂಚನೆಯ ಮಧ್ಯೆಯೂ ಗ್ಯಾಸ್ ಏಜೆನ್ಸಿ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಆರೋಪ ಸಹ ಕೇಳಿಬಂದಿದೆ. ಪರೀಕ್ಷೆ ಸಮಯವಾಗಿರುವುದರಿಂದ ಶಿಕ್ಷಕರು ಮಕ್ಕಳಿಗೆ ಅಭ್ಯಾಸ ಮಾಡಿಸುತ್ತಿದ್ದಾರೆ. ಇದರ ನಡುವೆ ಅಡುಗೆಗೆ ಆದ ತೊಂದರೆಯನ್ನು ಸಹ ಬಗೆಹರಿಸಿಕೊಂಡು ಹೋಗುವುದು ಅವರಿಗೆ ಕಷ್ಟವಾಗುತ್ತಿದೆ. ಕೂಡಲೇ ಗ್ಯಾಸ್ ಸೌಲಭ್ಯ ಕಲ್ಪಿಸುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಸ್ಥಳಿಯರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಸ್ನೇಹಿತನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು

Spread the loveಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಯುವಕನೊಬ್ಬ ಭದ್ರಾ ನದಿಯಲ್ಲಿ  ಮುಳುಗಿ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ  ತಾಲೂಕಿನ ಬನ್ನೂರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ