Breaking News

ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು,

Spread the love

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ 23 ರಿಂದ ಅಂದರೆ ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು, ಈಗಾಗಲೇ ಈಗಾಗಲೇ 9 ರಿಂದ 12ನೇ ತರಗತಿಗಳನ್ನು ತೆರೆಯೋದಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

 

`Yashaswini vima Yojana’ : ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ : ಶೀಘ್ರವೇ `ಯಶಸ್ವಿನಿ ವಿಮಾ ಯೋಜನೆ’ ಮರು ಜಾರಿ!

 

ಆಗಸ್ಟ್ 23 ರಿಂದ 9 ರಿಂದ 12 ನೇ ತರಗತಿಗಳಿಗೆ ಶಾಲೆ ಆರಂಭ ಮಾಡಲು ಸಿದ್ಧತೆ ನಡೆದಿದೆ.

 

 

ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

 

ಹಂತ ಹಂತವಾಗಿ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಡೇಂಜರ್ ಝೋನ್ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆಡೆ ಶಾಲೆ ತೆರೆಯಲಾಗುತ್ತದೆ. ಶೇ.2 ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣ ಇರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಉಡುಪಿ, ಹಾಸನ ಹೊರತುಪಡಿಸಿ ಉಳಿದ ಕಡೆ 9 ರಿಂದ 12 ನೇ ತರಗತಿಗಳಿಗೆ ಮೊದಲ ಹಂತದಲ್ಲಿ ಶಾಲೆ ಶುರುವಾಗಲಿದೆ.

ರಾಜ್ಯದ 9 ರಿಂದ 12ನೇ ತರಗತಿ ವಿದ್ಯಾರ್ಥಿ’ಗಳೇ ಗಮನಿಸಿ : ‘ಹಳೆಯ ವಿದ್ಯಾರ್ಥಿ ಪಾಸ್’ ತೋರಿಸಿ ಶಾಲಾ-ಕಾಲೇಜಿಗೆ ತೆರಳಲು BMTC ಅನುಮತಿ

ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಪ್ರಮುಖ ನಿಯಮಗಳು ಹೀಗಿವೆ :

  1. ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದರೆ ಒಂದು ವಾರ ಶಾಲೆ ಸೀಲ್​ಡೌನ್
  2. ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯುವಂತಿಲ್ಲ
  3. ಕೊರೊನಾ ಲಕ್ಷಣ ಕಂಡು ಬರುವ ಮಗುವನ್ನು ಶಾಲೆಗೆ ಕಳುಹಿಸುವಂತಿಲ್ಲ
  4. ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ
  5. ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆದಿರಬೇಕು
  6. ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಶಾಲೆಗೆ ಬರಬೇಕು
  7. ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 72 ಗಂಟೆಗಳ ಅಂತರದಲ್ಲಿ ಪಡೆದ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಬೇಕು
  8. ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ
  9. ಆನ್ ಲೈನ್ ಹಾಗೂ ಆಫ್ ಲೈನ್ ಎರಡಕ್ಕೂ ಅವಕಾಶ ಸಾಧ್ಯತೆ
  10. ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕಲಿಕೆಗೆ ಅವಕಾಶ

ಸಾಮಾನ್ಯ ನಿಯಂತ್ರಣ ಕ್ರಮಗಳು

  • ವಿದ್ಯಾರ್ಥಿಗಳು ತರಗತಿ ಮತ್ತು ಕಾಲೇಜು ಆವರಣದಲ್ಲಿ ಗುಂಪುಗೂಡಬಾರದು
  • ಕನಿಷ್ಠ 6 ಅಡಿಗಳ ಭೌತಿಕ ಅಂತರದ ನಿಯಮವನ್ನು ಪಾಲಿಸುವುದು.
  • ಮುಖ ಕವಚ, ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಕೆ ಮಾಡುವುದು.
  • ಪದೇ ಪದೇ ಕೈಗಳನ್ನು ಸೋಪಿನಿಂದ ತೊಳೆಯುವುದು.
  • ಕೆಮ್ಮುವಾಗ, ಸೀನುವಾಗ ಕಡ್ಡಾಯವಾಗಿ ಮುಖಕ್ಕೆ ಕರವಸ್ತ್ರ, ಟಿಶ್ಯು ಪೇಪರ್ ಬಳಸಬೇಕು.
  • ಎಲ್ಲೆಂದರಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸುವುದು.

Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ