Breaking News

ಶಾಲೆ ಆರಂಭದ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

Spread the love

ಬೆಂಗಳೂರು : ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನವರಿಯಿಂದಲೇ ಶಾಲೆ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮ ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಗ್ರಾಮೀಣ ಭಾಗಗಳ ಮಕ್ಕಳ ಹಿತದೃಷ್ಟಿಯಿಂದ ಆರಂಭಿಸಲಾದ ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಸಹ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿರುವ ಸಚಿವರು, ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಕ್ತ ನಿಲುವನ್ನು ಹೊಂದಿದೆ ಎಂದಿದ್ದಾರೆ.

ಲಭ್ಯವಾಗುವ ಸೀಮಿತ ಅವಧಿಯ ಹಿನ್ನೆಲೆ ಮಾರ್ಚ್ 2021ರಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲ ಎಂದು ಅವರು ಖಚಿತಪಡಿಸಿದ್ದಾರೆ.


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ