Breaking News

ಜಲ ಜೀವನ ಮಿಷನ್ 2.0 ಜಾರಿಗೆ ಮುದ್ರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ತಿಳುವಳಿಕೆ ಪತ್ರಕ್ಕೆ ಸಹಿ

Spread the love

ರಾಜ್ಯದ ಪ್ರತಿಯೊಂದು ಮನೆಗೂ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಇಂದು ಮಹತ್ವದ ಹೆಜ್ಜೆ ಇಡಲಾಗಿದೆ. ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಡುವೆ ‘ಜಲ ಜೀವನ ಮಿಷನ್ 2.0’ ಅನುಷ್ಠಾನಕ್ಕೆ ಸಂಬಂಧಿಸಿದ ತಿಳುವಳಿಕೆ ಪತ್ರಕ್ಕೆ ಇಂದು ಅಧಿಕೃತವಾಗಿ ಸಹಿ ಹಾಕಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಕೃಷ್ಣಾ ಗೃಹ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಲನೆ ನೀಡಿದರು. ದೆಹಲಿಯಿಂದ ಕೇಂದ್ರ ಜಲಸಂಪನ್ಮೂಲ ಸಚಿವ ಸಿ ಆರ್ ಪಾಟೀಲ್ ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ಅವರು ಪಾಲ್ಗೊಂಡು ಯೋಜನೆಯ ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಯೋಜನೆಯು ರಾಜ್ಯದ ಗ್ರಾಮೀಣ ಭಾಗದ ಜಲ ಮೂಲಗಳ ಸುಸ್ಥಿರತೆಗೆ ಹೆಚ್ಚಿನ ಒತ್ತು ನೀಡಲಿದೆ.


Spread the love

About Laxminews 24x7

Check Also

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Spread the loveಬೆಂಗಳೂರು:  ಸುರಿದ ಭಾರೀ ಮಳೆಗೆ ನಡೆದ ಅವಾಂತರಗಳು ಒಂದಾ.. ಎರಡಾ..? ಬೇಸಿಗೆ ಮಳೆಗೆ ಇಡೀ ಸಿಲಿಕಾನ್ ಸಿಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ