Breaking News

ಹುಟ್ಟುಹಬ್ಬದಂದೇ ನಾಲೆ ಬಳಿ ದ್ವಿತೀಯ ಪಿಯು ವಿದ್ಯಾರ್ಥಿ ನಿಗೂಢ ನಾಪತ್ತೆ

Spread the love

ಮಂಡ್ಯ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲೆ ಬಳಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಸಮೀಪದ ವರುಣಾ ನಾಲೆ ಬಳಿ ನಡೆದಿದೆ.

ಮೈಸೂರು ಮೂಲದ ವೈಭವ್ (17) ನಾಪತ್ತೆಯಾದ ವಿದ್ಯಾರ್ಥಿ. ಈತ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ನಿನ್ನೆ ವೈಭವ್‌ನ ಹುಟ್ಟುಹಬ್ಬ ಇದ್ದಿದ್ದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಆದರೆ, ಮನೆಯಿಂದ ಬೈಕ್‌ನಲ್ಲಿ ಹೊರಟಿದ್ದ ವೈಭವ್ ಬೆಳಗೊಳ ಸಮೀಪದ ವರುಣಾ ನಾಲೆ ಬಳಿ ಬಂದಿದ್ದಾನೆ. ಬಳಿಕ ಮನೆಗೆ ಮರಳದೆ ನಾಪತ್ತೆಯಾಗಿದ್ದಾನೆ.

ನಾಲೆಯ ದಂಡೆಯ ಮೇಲೆ ವೈಭವ್‌ನ ಬೈಕ್, ಬಟ್ಟೆ ಹಾಗೂ ಮೊಬೈಲ್ ಪತ್ತೆಯಾಗಿವೆ. ಆತ ನಾಲೆಯ ನೀರಿಗೆ ಇಳಿದು ಕೊಚ್ಚಿಹೋಗಿದ್ದಾನೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ನಾಪತ್ತೆಯಾಗಿದ್ದಾನೆಯೇ ಎಂಬ ಆತಂಕ ಕುಟುಂಬಸ್ಥರಲ್ಲಿ ಮೂಡಿದೆ.

ವಸ್ತುಗಳು ಪತ್ತೆಯಾದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ನಾಲೆಯ ನೀರಿನಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೆ.ಆರ್.ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಯುವತಿಗೆ ಮತ್ತು ಬರಿಸಿ ರೇಪ್‌ ಆರೋಪ – ಯುವಕ ಸಮೀರ್‌ ಬಂಧನ

Spread the loveಬೆಂಗಳೂರು: ರಾಜಸ್ಥಾನದ ಜೈಪುರದಿಂದ  ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬಳು ಅಪರಿಚಿತನೊಬ್ಬನ ಸ್ನೇಹ ಬೆಳೆಸಿ ಅತ್ಯಾಚಾರಕ್ಕೊಳಗಾಗಿರುವ ಘಟನೆ ಬೆಳಕಿಗೆ ಬಂದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ