Breaking News

ಭಾರತ – ಪಾಕ್ ಗಡಿಯಲ್ಲಿ ಇಬ್ಬರು ನುಸುಳುಕೋರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

Spread the love

ಚಂಡೀಗಢ: ಪಂಜಾಬ್‌ನ  ತರನ್‌ತಾರನ್ ಜಿಲ್ಲೆಯ ಭಾರತ-ಪಾಕಿಸ್ತಾನ  ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆಗೆ ಯತ್ನಿಸಿದ ಇಬ್ಬರು ನುಸುಳುಕೋರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಗಡಿ ಸಮೀಪದ ರಾಜೋಕೆ ಗ್ರಾಮದ ಬಳಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಇಬ್ಬರು ನುಸುಳುಕೋರರು ಯತ್ನಿಸಿದ್ದರು. ಈ ವೇಳೆ ಬಿಎಸ್‌ಎಫ್  ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಶುಕ್ರವಾರ ಮುಂಜಾನೆ ರಾಜೋಕೆ ಪ್ರದೇಶದ ಗಡಿ ಭಾಗದಲ್ಲಿ ಅನುಮಾನಾಸ್ಪದವಾಗಿ ಮೂವರು ಓಡಾಡುತ್ತಿದ್ದರು. ಇದನ್ನು ಗಮನಿಸಿದ BSF ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಆದರೆ ಅವರು ಹಿಂದಕ್ಕೆ ತೆರಳದೆ ಭಾರತೀಯ ಪ್ರದೇಶದತ್ತಲೇ ಬಂದಿದ್ದಾರೆ. ಈ ವೇಳೆ BSF ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬ ಒಳನುಸುಳುಕೋರ ಪಾಕಿಸ್ತಾನ ಭಾಗಕ್ಕೆ ಹಿಂದಿರುಗಿರುವ ಸಾಧ್ಯತೆ ಇದೆ.

ಘಟನೆಯ ಬಳಿಕ ಭಾರತ-ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಮೃತರ ಗುರುತು ಹಾಗೂ ಅವರಿಂದ ಯಾವ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ ಎಂಬ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ