Breaking News

ಸ್ವ ಉದ್ಯೋಗ ಒದಗಿಸಲು ಒತ್ತು ನೀಡಿ

Spread the love

ಬೆಳಗಾವಿ: ಗ್ರಾಮೀಣ ಭಾಗದ ಸ್ವಸಹಾಯ ಸಂಘದ ಮಹಿಳೆಯರಿಗೆ ಸ್ವ ಉದ್ಯೋಗ ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಅಲ್ಲದೆ, ಹೊಸ ಕಾರ್ಯಕ್ರಮ ರೂಪಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಸ್ವಸಹಾಯ ಸಂಘದ ಮಹಿಳೆಯರ ಆರ್ಥಿಕ ಏಳ್ಗೆಗೆ ನೆರವಾಗುವ ನಿಟ್ಟಿನಲ್ಲಿ ಕುಕ್ಕುಟ ಸಂಜೀವಿನಿ ಯೋಜನೆಯಡಿ ಸ್ವಸಹಾಯ ಸಂಘದ ಮಹಿಳೆಯರಿಂದ ಪ್ರತಿ ತಾಲೂಕಿಗೆ ಎರಡು ಕೋಳಿ ಶೆಡ್ ನಿರ್ವಹಿಸಲು ಕ್ರಮಕೈಗೊಳ್ಳಿ ಎಂದರು.
ಸ್ವಸಹಾಯ ಸಂಘದ ಮಹಿಳೆಯರಿಗೆ ಮೀನುಗಳ ಸಾಕಾಣಿಕೆ ಕುರಿತು ತರಬೇತಿ ನೀಡಿ, ಮುಂಬರುವ ಮಳೆಗಾಲದ ಸಂದರ್ಭದಲ್ಲಿ ಕೆರೆಗಳಲ್ಲಿ ಸ್ವಸಹಾಯ ಸಂಘದಿಂದ ಮೀನುಗಳನ್ನು ಬಿಟ್ಟು ಮೀನುಗಳ ಸಾಕಾಣಿಕೆಯನ್ನು ಆರಂಭಿಸಿ, ನಂತರ ಮೀನುಗಳ ಮಾರಾಟದಿಂದ ಸಂಘಗಳಿಗೆ ಆರ್ಥಿಕ ಬಲ ತುಂಬಿದಂತಾಗಲಿದೆ.ಸಮಗ್ರ ಕೃಷಿ ಸಮೂಹ, ಲಕ್ ಪತಿ ದೀದಿ, ವನಧನ ವಿಕಾಸ ಕೇಂದ್ರ ಹಾಗೂ ಇನ್ನಿತರೇ ಕಾರ್ಯಕ್ರಮಗಳಡಿ ಸ್ವಸಹಾಯ ಸಂಘದ ಮಹಿಳೆಯರಿಗೆ ಉದ್ಯೋಗ ಒದಗಿಸಿ, ಆರ್ಥಿಕ ಏಳ್ಗೆ ಹೊಂದಲು ನೆರವಾಗಿ ಎಂದು ಸೂಚನೆ ನೀಡಿದರು.
ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಸಹಾಯಕ ಯೋಜನಾಧಿಕಾರಿ ಭಾಗ್ಯಶ್ರೀ ಜಹಾಗೀರದಾರ ಇತರರಿದ್ದರು.

Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ