Breaking News

ಸ್ವಯಂ ಉದ್ಯೋಗದಿಂದ ನಿಶ್ಚಿತ ಗುರಿ ಸಾಧ್ಯ

Spread the love

ರಾಮದುರ್ಗ: ವಿದ್ಯಾರ್ಥಿಗಳು ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಸದ್ಭಳಕೆ ಮಾಡಿಕೊಂಡು, ಆತ್ಮವಿಶ್ವಾಸದೊಂದಿಗೆ ಸ್ವಯಂ ಉದ್ಯೋಗ ಕೆಗೊಂಡದಲ್ಲಿ ನಿಶ್ಚಿತ ಗುರಿ ತಲುಪಲು ಸಾಧ್ಯ ಎಂದು ವಿರಕ್ತಮಠ ಟ್ರಸ್ಟ್​ ಅಧ್ಯ ಪ್ರದಿಪಕುಮಾರ ಪಟ್ಟಣ ಹೇಳಿದರು.
ನಗರದ ಅರಮನೆ ಆವರಣದಲ್ಲಿರುವ ಕ್ಯಾಂಬ್ರೀಡ್ಜ್​ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಈಚೆಗೆ ಉದ್ಘಾಟಿಸಿ ಮಾತನಾಡಿದರು.
ತಹಸೀಲ್ದಾರ್​ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಯುವಕರು ಭವಿಷ್ಯ ರೂಪಿಸಿಕೊಳ್ಳಲು ಶಿಣದ ಪಾತ್ರ ಅಲ್ಲಗಳೆಯುವಂತಿಲ್ಲ. ಪಾಲಕರು ಮಕ್ಕಳ ಚಲನವಲನಗಳ ಬಗ್ಗೆ ನಿಗಾ ವಹಿಸಿ, ಮಾರ್ಗದರ್ಶನ ನೀಡಿ ಎಂದರು.
ಸಾನ್ನಿಧ್ಯ ವಹಿಸಿ ಮಾತನಾಡಿದ ಮುಳ್ಳೂರ ಅನ್ನದಾನೇಶ್ವರ ಮಠದ ಚಂದ್ರಶೇಖರ ಶಿವಾಚಾರ್ಯರು, ವಿದ್ಯಾರ್ಥಿಗಳು ಮೊಬೆಲ್​, ಟಿವಿ ಬಳಕೆಯಿಂದ ದೂರವಿದ್ದು, ಓದಿನ ಕುರಿತು ಗಮನ ಹರಿಸಿ ಎಂದರು.
ವಿಜಯ ಸೇನಾ ಸಮಿತಿ ಸಂಸ್ಥಾಪಕ ಅಧ್ಯ ವಿಜಯ ನಾಯಕ, ಸಂಸ್ಥೆಯ ಅಧ್ಯ ಮಹಾಂತೇಶ ರೊಕ್ಕದಕಟ್ಟಿ ಮಾತನಾಡಿದರು. ಶಾಲೆಯ ವಾರ್ಷಿಕ ಕ್ರೀಡಾ ಕೂಟ ಹಾಗೂ ವಿವಿಧ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ವಿದ್ಯಾರ್ಥಿಗಳಿಗೆ ಸಾಂಸತಿಕ ಕಾರ್ಯಕ್ರಮ ನಡೆದವು.
ಸಂಸ್ಥೆಯ ಆಡಳಿತಾಧಿಕಾರಿ ನಂದಿನಿ ಪಿ., ಮುಖ್ಯಶಿಕ್ಷಕಿ ಶಶಿಕಲಾ ರೊಕ್ಕದಕಟ್ಟಿ, ಪತ್ರಕರ್ತರಾದ ಮಲ್ಲಿಕಾರ್ಜುನರಡ್ಡಿ ಗೊಂದಿ, ಗೌಡಪ್ಪಗೌಡ ಪಾಟೀಲ ಇತರರಿದ್ದರು. ಶಿಕಿ ರಹೀಮಾ ದೇಸಾಯಿ ಸ್ವಾಗತಿಸಿದರು. ಅನುಪಮಾ ಬುಳ್ಳನ್ನವರ ನಿರೂಪಿಸಿದರು. ಶತಿ ಬೆಡಗೆ ವಂದಿಸಿದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ