Breaking News

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಅತ್ಯಾಚಾರಿಗೆ ಶಿಕ್ಷೆ ಪ್ರಕಟ

Spread the love

ಬೆಳಗಾವಿ: ಅಪ್ರಾಪ್ತೆ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಡೋರಿ ಗ್ರಾಮದ ನಿವಾಸಿ ಸಂಜಯ ವಿಠ್ಠಲ ಬೈಲೂರ(೩೬) ಎಂಬುವ ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ ೧ ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.
ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ಪುಸಲಾಯಿಸಿ ಅಪರಾಧಿಯು ಒತ್ತಾಯ ಪೂರ್ವಕವಾಗಿ ಅತ್ಯಾಚಾರವೆಸಗಿದ್ದ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಎಲ್.ಎಚ್.ಗೌಂಡಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ ಹೇಳಿದ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ ರೂ.ಪರಿಹಾರ ಧನ ನೀಡುವಂತೆ ಸೂಚಿಸಲಾಗಿದೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ