Breaking News

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

Spread the love

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಶಿಲ್ಪಾ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.


Spread the love

About Laxminews 24x7

Check Also

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Spread the loveಕೋಲ್ಕತ್ತಾ: 15 ವರ್ಷಗಳ ದೀದಿ ಆಡಳಿತ ಕೊನೆಗೊಳಿಸಿ ಅಧಿಕೃತವಾಗಿ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ