Breaking News

ದೆಹಲಿ ಹೈಕೋರ್ಟ್‌ನಲ್ಲಿ ನೆಹಾ ಬೋರಾಗೆ ಹಿನ್ನಡೆ – 10,000 ರೂ. ಬಾಂಡ್‌ಗೆ ಸಹಿ ಹಾಕಿ ಶಾಂತಿ ಕಾಪಾಡುವಂತೆ ಸೂಚನೆ

Spread the love

ನವದೆಹಲಿ: ಅಖಿಲ ಭಾರತ ವಿದ್ಯಾರ್ಥಿ ಸಂಘದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಹೋರಾಟಗಾರ್ತಿ ನೆಹಾ ಬೋರಾ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.

ದೆಹಲಿ ಪೊಲೀಸರು ನೀಡಿದ್ದ ನೋಟಿಸ್ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ವಜಾಗೊಳಿಸಿದೆ. ವಿಚಾರಣೆ ವೇಳೆ ಶಾಂತಿ ಕಾಪಾಡುವುದಾಗಿ ಭರವಸೆ ನೀಡುವ 10,000 ರೂ. ವೈಯಕ್ತಿಕ ಬಾಂಡ್‌ಗೆ ಸಹಿ ಹಾಕುವಂತೆಯೂ ಹಾಗೂ ಒಬ್ಬ ಜಾಮೀನುದಾರರನ್ನ ಒದಗಿಸುವಂತೆ ಕೋರ್ಟ್‌ ಸೂಚಿಸಿದೆ ಎಂದು ವರದಿಯಾಗಿದೆ.

ಏನಿದು ಪ್ರಕರಣ?
ಅಕ್ಟೋಬರ್ 16ರಂದು ನಡೆದ ‘ಲೆಹ್ರಾ ದೋ ತಿರಂಗಾ’ ಯಾತ್ರೆಯಲ್ಲಿ ನೇಹಾ ಬೋರಾ ಭಾಗವಹಿಸಿದರು. ಬಳಿಕ ದೆಹಲಿ ಪೊಲೀಸರು ಅವರನ್ನ ವಶಕ್ಕೆ ಪಡೆದು, ಬಿಡುಗಡೆ ಮಾಡಿದ್ದರು. ಬಳಿಕ ನೋಟಿಸ್ ಜಾರಿಗೊಳಿಸಿದ್ದರು. ಆದ್ರೆ ನೇಹಾ ಬೋರಾ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ಹೊರಡಿಸಿದ್ದ ಮುನ್ನೆಚ್ಚರಿಕಾ ನೋಟಿಸ್ ಅನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಕ್ರಮವು ನಮ್ಮ ಮೂಲಭೂತ ಹಕ್ಕುಗಳಿಗೆ ಧಕ್ಕೆ ಉಂಟುಮಾಡುತ್ತದೆ. ಆದ್ದರಿಂದ ಸಂಬಂಧಿತ ವಿಚಾರಣಾ ಪ್ರಕ್ರಿಯೆಯನ್ನ ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಈ ಪ್ರಕರಣದ ಆದೇಶವನ್ನ ನ್ಯಾಯಾಲಯ ಗುರುವಾರ ಕಾಯ್ದಿರಿಸಿತ್ತು. ಇದೀಗ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ನೆಹಾ ಬೋರಾ ಅವರು ಬಾಂಡ್‌ಗೆ ಸಹಿ ಹಾಕಿ ಶಾಂತಿ ಕಾಪಾಡುವಂತೆ ನಿರ್ದೇಶನ ನೀಡಿದೆ.


Spread the love

About Laxminews 24x7

Check Also

ದೆಹಲಿ ಹೈಕೋರ್ಟ್‌ನಲ್ಲಿ ನೆಹಾ ಬೋರಾಗೆ ಹಿನ್ನಡೆ – 10,000 ರೂ. ಬಾಂಡ್‌ಗೆ ಸಹಿ ಹಾಕಿ ಶಾಂತಿ ಕಾಪಾಡುವಂತೆ ಸೂಚನೆ

Spread the loveನವದೆಹಲಿ: ಅಖಿಲ ಭಾರತ ವಿದ್ಯಾರ್ಥಿ ಸಂಘದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಹೋರಾಟಗಾರ್ತಿ ನೆಹಾ ಬೋರಾ ಅವರಿಗೆ ದೆಹಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ