ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯ್ಯದ್ಯಂತ ಸೇವಾ ಸಂಕಲ್ಪ ಅಭಿಯಾನ ಆಯೋಜಿಸಿ, ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ತಿಳಿಸಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ನರೇಂದ್ರ ಮೋದಿ ಸಾರ್ವಜನಿಕ ಜೀವನದಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರ್ಣಗೊಳಿಸುತ್ತಿದ್ದು, ಈ ಅವಧಿಯಲ್ಲಿ ಜನಸೇವೆ, ಸುಶಾಸನ, ಸಮರ್ಪಣೆ ಹಾಗೂ ಪರಿವರ್ತನೆಯ ಮೂಲಕ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಂತಹ ನಾಯಕನ ಜನ್ಮದಿನವನ್ನು ಕೇವಲ ಸಂಭ್ರಮಾಚರಣೆಯಾಗಿ ಆಚರಿಸುವ ಬದಲು, ಸೇವೆಯ ಮೂಲಕ ಜನರನ್ನು ತಲುಪುವ ಸಂಕಲ್ಪದ ದಿನವನ್ನಾಗಿ ಮಾಡಬೇಕು.
ಜಿಲ್ಲೆಯ ಪ್ರತಿಯೊಂದು ತಾಲೂಕು ಹಾಗೂ ಮಂಡಲ ಮಟ್ಟದಲ್ಲಿಯೂ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿ, ಹೆಚ್ಚಿನ ಸಂಖ್ಯೆಯ ಜನರು ಇದರ ಪ್ರಯೋಜನ ಪಡೆಯುವಂತೆ ಕ್ರಮ ಕೈಗೊಳ್ಳಬೇಕು.ಸೇವೆ, ಸಮರ್ಪಣೆ ಮತ್ತು ಸಂಕಲ್ಪ ಎಂಬ ಆಶಯದೊಂದಿಗೆ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಅಭಿಯಾನದ ಉದ್ದೇಶವನ್ನು ಜನರಿಗೆ ತಲುಪಿಸಬೇಕು ಎಂದರು.
ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕ ಸಂದೀಪ ದೇಶಪಾಂಡೆ, ಸಂತೋಷ ಹಡಪದ, ಮಹಾಂತೇಶ ಚಿನ್ನಪ್ಪಗೌಡರ, ಯಲ್ಲೇಶ ಕೋಲಕಾರ, ಜಗದೀಶ ಬೂದಿಹಾಳ, ಮಹೇಶ ಮೋಹಿತೆ, ಮುರುಘೇಂದ್ರಗೌಡ ಪಾಟೀಲ, ಪ್ರಮೋದ ನುಗ್ಗಾನಟ್ಟಿ ಇತರರಿದ್ದರು.
Laxmi News 24×7