Breaking News

ಶಿವಾನಂದ ಕೌಜಲಗಿ ನಿಧನ: ನಿವಾಸಕ್ಕೆ ಭೇಟಿ ನೀಡಿ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

Spread the love

ಬೆಳಗಾವಿ: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಹಾಗೂ ಕೆಎಲ್‌ಇ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಾನಂದ ಕೌಜಲಗಿ ಅವರ ನಿಧನಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.

ಬೈಲಹೊಂಗಲದಲ್ಲಿರುವ ದಿವಂಗತ ಶಿವಾನಂದ ಕೌಜಲಗಿ ಅವರ ನಿವಾಸಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ಪುತ್ರ ಹಾಗೂ ಶಾಸಕ ಮಹಾಂತೇಶ ಕೌಜಲಗಿ ಸೇರಿದಂತೆ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಹಾಗೂ ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿ ಶಿವಾನಂದ ಕೌಜಲಗಿ ಅವರು ಶಿಕ್ಷಣ, ಸಮಾಜಸೇವೆ ಮತ್ತು ಸಾರ್ವಜನಿಕ ಜೀವನಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಜನಪರ ಸೇವೆ ಹಾಗೂ ಕಾರ್ಯಗಳು ಸದಾ ಸ್ಮರಣೀಯವಾಗಿರಲಿವೆ. ಅವರ ನಿಧನದಿಂದ ಸಾರ್ವಜನಿಕ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ದಾಖಲೆ ಬರೆದ ಹಾಸನಾಂಬ ಜಾತ್ರಾ ಮಹೋತ್ಸವ – 29.55 ಕೋಟಿ ರೂ. ಆದಾಯ ಸಂಗ್ರಹ

Spread the loveಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ. ಒಟ್ಟು 30,06,000 ಭಕ್ತರು ದೇವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ