Breaking News
Home / ಜಿಲ್ಲೆ / ಉಡುಪಿ / ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು :ಸಂಸದೆ ಶೋಭಾ ಕರಂದ್ಲಾಜೆ

ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು :ಸಂಸದೆ ಶೋಭಾ ಕರಂದ್ಲಾಜೆ

Spread the love

ಉಡುಪಿ: ದೇಶದಲ್ಲಿ ಕೊರೊನಾ ಜಿಹಾದ್ ನಡೆಯುತ್ತಿದೆ. ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊರೊನಾ ರೋಗಿ ವೈದ್ಯರನ್ನು ತಬ್ಬಿಕೊಳ್ಳುತ್ತಾರೆ. ನರ್ಸ್ ಗಳಿಗೆ ರೋಗ ಹಬ್ಬಿಸುವ ಧಮ್ಕಿ ಹಾಕಿದ್ದಾರೆ. ಇದು ಭಯೋತ್ಪಾದನೆಯ ಮುಂದುವರಿದ ಭಾಗ. ಕ್ವಾರಂಟೈನ್‍ನಲ್ಲಿ ಇರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ಕಠಿಣವಾದ ಕಾನೂನು ದೇಶದಲ್ಲಿ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ವಿಚಾರದಲ್ಲಿ ನಾನು ರಾಜಕೀಯ ಮಾಡುತ್ತಿಲ್ಲ. ಕೊರೊನಾ ಹಬ್ಬಿಸುವ ದುರ್ಬುದ್ಧಿಯವರನ್ನು ಜನತೆಯ ಮುಂದೆ ತೆರೆದಿಡುತ್ತಿದ್ದೇನೆ ಎಂದು ಮಾಜಿ ಸಚಿವ ಯುಟಿ ಖಾದರ್ ಗೆ ತಿರುಗೇಟು ನೀಡಿದರು. ಸಾಧಿಕ್ ನಗರದ ಆಶಾ ಕಾರ್ಯಕರ್ತೆಯ ಮನೆಗೆ ಭೇಟಿ ಕೊಟ್ಟಿದ್ದೇನೆ. ಆಕೆಯ ಸ್ಥಿತಿ ಕಂಡು ನನಗೆ ದುಃಖ ಆಯಿತು ಎಂದರು.

ಕೇರಳ ಕೊರೊನಾ ರೆಡ್ ಜೋನ್ ಏರಿಯಾ ಆಗಿದೆ. ಕಾಸರಗೋಡು ಇಡೀ ದೇಶದ ರೆಡ್ ಜೋನ್ ಏರಿಯಾ. ಕೇರಳದವರು ನಮ್ಮ ರಾಜ್ಯದಲ್ಲಿ ಕೊರೋನಾ ಹಬ್ಬಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು

ಕಾಸರಗೋಡಿಗೆ ಚಿಕ್ಕಮಗಳೂರಿನಿಂದ ತರಕಾರಿ ರವಾನೆ ಮಾಡಿದ್ದೇವೆ. ಮಾನವೀಯತೆ ವಿಚಾರದಲ್ಲಿ ನಾವು ಹಿಂದೆ ಮುಂದೆ ನೋಡುವುದಿಲ್ಲ. ಅಗತ್ಯ ಸೇವೆ ಮತ್ತು ವೈದ್ಯಕೀಯ ಸೇವೆ ನೀಡಲು ಸಿದ್ಧವಿದೆ. ವೈದ್ಯರು, ನರ್ಸ್‍ಗಳು ಅಲ್ಲಿಗೆ ಕಳುಹಿಸುತ್ತೇವೆ. ಆದರೆ ಕೇರಳ ಕಾಸರಗೋಡಿನ ಜನ ಕರ್ನಾಟಕಕ್ಕೆ ಬರಬಾರದು. ನಾವು ಯಾವುದೇ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ ಎಂದು ಹೇಳಿದರು. ಇಲ್ಲಿನ ವಾಹನ ಹೋಗುವ ಬರುವ ಸಂದರ್ಭದಲ್ಲಿ ಕ್ರಿಮಿನಾಶಕ ಸಿಂಪಡಣೆ ಆಗತ್ಯ ಎಂದು ತಿಳಿಸಿದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ