Breaking News

ಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಆರೆಂಜ್‌ ಅಲರ್ಟ್‌ ಘೋಷಣೆ

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಮಳೆಯಾಗಿದೆ. ಈ ಬೆನ್ನಲ್ಲೇ ಆರೆಂಜ್‌ ಅಲರ್ಟ್‌  ಘೋಷಿಸಿರುವ ರಾಜ್ಯ ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ.

ನಗರದ ಸಂಪಂಗಿರಾಮನಗರ, ಕಂಠೀರವ ಸ್ಟೇಡಿಯಂ, ಕಾರ್ಪೋರೇಷನ್ ಸರ್ಕಲ್ ಸುತ್ತಮುತ್ತ ಹಾಗೂ ಬೆಂಗಳೂರು ಗ್ರಾಮಾಂತರಕ್ಕೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಒಟ್ಟಿನಲ್ಲಿ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು, ಬಿರುಗಾಳಿ ಸಹಿತ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದಿರುವಂತೆ ಸೂಚಿಸಿದೆ.
ಬೆಂಗಳೂರಿನಲ್ಲಿ ಸಂಜೆ 6 ಗಂಟೆ ಬಳಿಕ ಮಳೆ ಆರಂಭವಾಗಿದೆ. ವಿಧಾನಸೌಧ, ಕಬ್ಬನ್ ಪಾರ್ಕ್, ಕಾರ್ಪೋರೇಷನ್ ಸುತ್ತಮುತ್ತ ವರುಣನ ಸಿಂಚನವಾಗಿದೆ.

ಕಳೆದ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿರುವ ಹಿನ್ನೆಲೆ ನಗರದ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಖನಿಜ ಭವನ ಮುಂಭಾಗದಲ್ಲಿ ಬೃಹತ್‌ ಮರವೊಂದು ದರೆಗುರುಳಿದೆ. ರೇಸ್ ಕೋರ್ಸ್ ರಸ್ತೆ ಸುತ್ತ ಮುತ್ತ ಟ್ರಾಫಿಕ್ ಜಾಮ್ ಆಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

Spread the loveಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ  ಕೆಲವು ಲೋಪ ಕಂಡುಬಂದ ಹಿನ್ನೆಲೆ ಬಿಜೆಪಿ, ಜೆಡಿಎಸ್  ಮೈತ್ರಿ ನಾಯಕರು ಮುಖ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ