Breaking News

ರಾಜೀನಾಮೆ ಪರ್ವದ ನಡುವೆ ಟಿಎಂಸಿಗೆ ಶಾಕ್‌ – ಮಮತಾ ಬ್ಯಾನರ್ಜಿ ವಿರುದ್ಧ FIR

Spread the love

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿ ಒಂದು ಕಡೆ ರಾಜೀನಾಮೆ ಪರ್ವ ಮುಂದುವರಿದಿದೆ. ಘಟಾನುಘಟಿ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌ ಎದುರಾಗಿದೆ.

ಕಳೆದ ಮಾರ್ಚ್‌ ತಿಂಗಳಲ್ಲಿ ರಾಜಕೀಯ ಭಾಷಣದ ವೇಳೆ ಕೋಮುದ್ವೇಷ ಹರಡುವ ಹೇಳಿಕೆ ನೀಡಿದ್ದರ ಆರೋಪದ ಮೇಲೆ ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜಕೀಯ ಭಾಷಣದ ವೇಳೆ ದೀದಿ, ʻಒಂದು ನಿರ್ದಿಷ್ಟ ಸಮುದಾಯ ಒಟ್ಟಿಗೆ ಬಂದರೆ ಅದು ಇತರರ ಮೇಲೆ ಅಪಾಯಕಾರಿ ಪರಿಣಾಮ ಬೀರಬಹುದುʼ ಎಂದು ಮಮತಾ ಹೇಳಿದ್ದರು. ಅವರ ಸಾರ್ವಜನಿಕ ಭಾಷಣಗಳನ್ನ ಉಲ್ಲೇಖಿಸಿ, ಕೋಲ್ಕತ್ತಾ ನಿವಾಸಿಯೊಬ್ಬರು ಹರೇ ಸ್ಟ್ರೀಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಕೋಲ್ಕತ್ತಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಭಾಷಣವು ಕೋಮು ಸಾಮರಸ್ಯವನ್ನು ಕೆಡಿಸುವ ಉದ್ದೇಶ ಹೊಂದಿದೆ. ಅಲ್ಲದೇ ಸಾರ್ವಜನಿಕ ಅಶಾಂತಿಯನ್ನ ಉತ್ತೇಜಿಸುತ್ತದೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೂಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ