ಮೈಸೂರು: ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತರಬಾರದಿತ್ತು, ಧೈರ್ಯವಾಗಿ ಎದುರಿಸಿ ಫೈಟ್ ಮಾಡಬೇಕಿತ್ತು,ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರಿನಲ್ಲಿ ಭೇಟಿಯಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಗೌಪ್ಯ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಈ ದಿಢೀರ್ ಭೇಟಿಯ ಕುರಿತು ವಿವರ ನೀಡಲು ನಿರಾಕರಿಸಿದ ಜಾರಕಿಹೊಳಿ, “ಸಿದ್ದರಾಮಯ್ಯ ಅವರು ಯಾವ ಪಕ್ಷದಲ್ಲಿದ್ದರೂ ಅವರು ನಮ್ಮ ನಾಯಕರು. ನಾನು ಈಗ ಆ ಸ್ಟಿಂಗ್ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ. ನಾನು ಬೇರೆಯದೇ ವಿಚಾರವಾಗಿ ಅವರನ್ನು ಮಾತನಾಡಿಸಲು ಬಂದಿದ್ದೆ. ಇದು ಖಾಸಗಿ ಭೇಟಿ” ಎಂದು ಸ್ಪಷ್ಟಪಡಿಸಿ ಅಲ್ಲಿಂದ ತೆರಳಿದರು.
ಸುಮಾರು 30 ನಿಮಿಷಗಳಿಗೂ ಅಧಿಕ ಕಾಲ ಉಭಯ ನಾಯಕರ ನಡುವೆ ನಡೆದ ಈ ಸುದೀರ್ಘ ಚರ್ಚೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.
Laxmi News 24×7