Breaking News

‘ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೀನಿ’ -ಸಿದ್ದರಾಮಯ್ಯ

Spread the love

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿರುವುದಾಗಿ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಸ್ವತಃ ಈ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ, ನಾನು ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೇನೆ. ಜನರು ಇದಕ್ಕೆ ವಂತಿಗೆ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದರು. ರಾಮ ಜನರ ಧಾರ್ಮಿಕ ನಂಬಿಕೆ.
ಎಲ್ಲಾ ಕಡೆ ರಾಮಮಂದಿರ ಕಟ್ಟುತ್ತಾರೆ, ಅದರಲ್ಲೇನಿದೆ? ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ. ಇದನ್ನು ಅವರು ರಾಜಕಾರಣಕ್ಕೆ ಬಳಸುತ್ತಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ರಾಮಮಂದಿರಕ್ಕೆ ಬಿಜೆಪಿ ದೇಣಿಗೆ ಸಂಗ್ರಹಿಸುತ್ತಿರುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಜನರು ರಾಮಮಂದಿರಕ್ಕೆ ದೇಣಿಗೆ ನೀಡುತ್ತಿದ್ದಾರೆ, ಅದು ಬಿಜೆಪಿಗಾಗಿ ಅಲ್ಲ. ಲೆಕ್ಕ ಕೇಳುವ ಅಧಿಕಾರ ನನಗೆ ಇದೆ. ನಾನು ಈ ದೇಶದ ಪ್ರಜೆ. ನಾನು ದುಡ್ಡು ಕೊಡಲಿ ಬಿಡಲಿ..ಲೆಕ್ಕ ಕೊಡಬೇಕಾಗಿರುವುದು ಅವರ ಕೆಲಸ.ಕೇಳುವುದು ನಮ್ಮ ಹಕ್ಕು ಎಂದರು. ಲೆಕ್ಕ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಅದರ ಅರ್ಥ ಹಣ ದುರುಪಯೋಗವಾಗುತ್ತಿದೆ. ಈ ಹಿಂದೆಯೂ ಇವರು ದೇಣಿಗೆ ಸಂಗ್ರಹಿಸಿ ಲೆಕ್ಕ ಕೊಟ್ಟಿಲ್ಲ. ಇದರ ಅರ್ಥ ಏನು ಅವರೇ ಹೇಳಬೇಕು ಎಂದು ಪ್ರಶ್ನೆ ಮಾಡಿದ್ರು.


Spread the love

About Laxminews 24x7

Check Also

ತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್

Spread the loveಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ