ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಗರದಲ್ಲಿ ಕಾಂಗ್ರೆಸ್ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಅಭಿಮಾನಿಗಳು ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದ್ದಾರೆ.
ಮೈಸೂರು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಬಿ.ಜೆ ವಿಜಯಕುಮಾರ್ ಅವರು ಘೋಷಣೆ ಕೂಗಿದ್ದಾರೆ. ಸನ್ಮಾನ ಮಾಡುವ ವೇಳೆ ಶಾಶ್ವತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅವರು ಘೋಷಣೆ ಕೂಗಿದರು. ಈ ವೇಳೆ 2028 ಕ್ಕೂ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪರಿಶೀಲನೆ ಮಾಡಿ ಸಿದ್ದರಾಮಯ್ಯ ಅವರು ಅಲ್ಲಿಂದ ತೆರಳಿದ್ದಾರೆ.
Laxmi News 24×7