ಬೆಂಗಳೂರು: ತಮ್ಮ ವಿರುದ್ಧ ಮಾನಹಾನಿಕರ ಹಾಗೂ ಅವಹೇಳನಕಾರಿ ಪೋಸ್ಟ್ಗಳು ಮತ್ತು ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಈ ಸಂಬಂಧ ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ಸಿದ್ದರಾಮಯ್ಯ ಪರವಾಗಿ ವಕೀಲ ಪ್ರವೀಣ್ ಕಾಮತ್ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧದ ಆಕ್ಷೇಪಾರ್ಹ ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಹಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಪ್ರತಿವಾದಿಗಳನ್ನಾಗಿ ಮಾಡಿ ಈ ಅರ್ಜಿ ಸಲ್ಲಿಸಲಾಗಿದೆ. ತಮ್ಮ ವಿರುದ್ಧ ಮಾನಹಾನಿಕರ ಮತ್ತು ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುವುದನ್ನು ತಡೆಯುವಂತೆ ಸಿದ್ದರಾಮಯ್ಯ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಈ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನ CCH-18ರಲ್ಲಿ ತಡೆಯಾಜ್ಞೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬರಲಿದೆ. ನ್ಯಾಯಾಲಯ ಈ ಕುರಿತು ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
Laxmi News 24×7