ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ಲ್ಯಾಂಡಿಂಗ್‌

Spread the love

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ಲ್ಯಾಂಡ್‌ ಆಗಿದೆ.

ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ಸುದ್ದಿಗೋಷ್ಠಿ ನಡೆಸಿದ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟಿದ್ದರು. ಆದರೆ ದೆಹಲಿಯಲ್ಲಿ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಜೈಪುರಕ್ಕೆ ಮಾರ್ಗ ಬದಲಿಸಲಾಯಿತು.

ವಿಶೇಷ ವಿಮಾನದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಕೆ.ಜೆ ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಇದ್ದರು.


Spread the love

About Laxminews 24x7

Check Also

ಮಾಜಿ ಸಚಿವ ವೆಂಕಟರಮಣಪ್ಪ ಅಗಲಿಕೆಗೆ ಜಿ.ಪರಮೇಶ್ವರ್‌ ಕಂಬನಿ

Spread the loveತುಮಕೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್‌  ಅವರು ಪಾವಗಡ ಮಾಜಿ ಶಾಸಕರು ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ