Breaking News

ಸಿದ್ದರಾಮಯ್ಯ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವ ; ಶಶಿಕಲಾ ಜೊಲ್ಲೆ ಆಕ್ರೋಶ

Spread the love

ಯಕ್ಸಂಬಾ : ಮೂಡಾ ಹಗರಣದ ನಂತರ ಹದಿನಾಲ್ಕು ಸೈಟ್ ವಾಪಸ್ ನೀಡಿರುವ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಸಾವಿರ ದಿನ ಪೂರೈಸಿದ ಸಮಾವೇಶ ಮಾಡುವುದು ಹಾಸ್ಯಾಸ್ಪದ ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಯಕ್ಸಂಬಾ ಪಟ್ಟಣದ ಬೀರೇಶ್ವರ ಸಭಾಗೃಹದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿ ಹಾಗೂ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಭೃಷ್ಟಚಾರ ತಾಂಡವವಾಡುತ್ತಿದೆ. ವಾಲ್ಮೀಕಿ, ಮೂಡಾ, ಅಬಕಾರಿ ಸೇರಿದಂತೆ ಅನೇಕ ಹಗರಣದಲ್ಲಿ ಕಾಂಗ್ರೆಸ್ ಮುಳುಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬೆಲೆ ಏರಿಕೆಯಿಂದ ಜನ ಕಂಗಾಲಾಗಿದ್ದಾರೆ. ನಿರಂತರವಾಗಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿವೆ. ಯುವ ಜನತೆಗೆ ಉದ್ಯೋಗ ನೀಡುವಲ್ಲಿ ಕಾಂಗ್ರೆಸ್ ಸರಕಾರ‌ ಸಂಪೂರ್ಣ ವಿಫಲವಾಗಿದ್ದು ಇದು ರಾಜ್ಯದ ಜನರ ದುರ್ದೈವ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಅಣ್ಣಾಸಾಹೆಬ್ ಜೊಲ್ಲೆ, ಮಾಜಿ ಶಾಸಕ ಸಂಜಯ್ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸುವರ್ಣ ಸೌಧದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೈ-ವೋಲ್ಟೇಜ್ ಮೀಟಿಂಗ್

Spread the loveಬೆಳಗಾವಿ: ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸುವರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ