Home / ಜಿಲ್ಲೆ / ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಪಕ್ಷದ ಜೊತೆಗೆ ಹೆಜ್ಜೆ ಹಾಕುವುದು ನಮ್ಮ ಕರ್ತವ್ಯವೂ ಹೌದು; ಸಿದ್ದರಾಮಯ್ಯ

ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಪಕ್ಷದ ಜೊತೆಗೆ ಹೆಜ್ಜೆ ಹಾಕುವುದು ನಮ್ಮ ಕರ್ತವ್ಯವೂ ಹೌದು; ಸಿದ್ದರಾಮಯ್ಯ

Spread the love

ಬೆಂಗಳೂರು (ಏಪ್ರಿಲ್‌ 19); ಕೊರೋನಾ ಸೋಂಕು ಇಡೀ ರಾಜ್ಯಕ್ಕೆ ಕಂಟಕವಾಗಿರುವ ಹಿನ್ನೆಲೆಯಲ್ಲಿ ಈ ಸೋಂಕು ಹರಡದಂತೆ ತಡೆಯುವ ಮತ್ತು ಕುಸಿಯುತ್ತಿರುವ ರಾಜ್ಯದ ಆರ್ಥಿಕತೆಯನ್ನು ಸುಧಾರಿಸಲು ಪರಿಹಾರ ಸೂಚಿಸುವುದು ಹಾಗೂ ಇಂತಹ ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಪಕ್ಷದ ಜೊತೆ ಜೊತೆಗೆ ಹೆಜ್ಜೆ ಹಾಕುವುದು, ಸತ್ಯಗಳನ್ನು ಪ್ರಸ್ತುತ ಪಡಿಸುವುದು ವಿರೋಧ ಪಕ್ಷದ ಕರ್ತವ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಮಾಜಿ ಡಿಸಿಎಂ ಜಿ.ಪರಮೇಶ್ವರ್‌, ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌ ಒಳಗೊಂಡ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ನಿಯೋಗ ಇಂದು ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದರು. ಅಲ್ಲದೆ, ಕೊರೋನಾ ವೈರಸ್‌ ತಡೆಗಟ್ಟುವ ಕ್ರಮ ಹಾಗೂ ತತ್‌ಕ್ಷಣ ರಾಜ್ಯ ಸರ್ಕಾರ ಗಮನವಹಿಸಬೇಕಾದ ಪ್ರಮುಖ ವಿಷಯಗಳ ಕುರಿತ 15 ಅಂಶದ ವರದಿ ಸಲ್ಲಿಸಿದ್ದಾರೆ.

ಈ ವರದಿ ಸಲ್ಲಿಸಿದ ನಂತರ ಸರಣಿ ಟ್ವೀಟ್ ಮಾಡುವ ಮೂಲಕ ವರದಿಯಲ್ಲಿನ ಉದ್ದೇಶ ಏನು? ಎಂದು ತಿಳಿಸಿರುವ ಸಿದ್ದರಾಮಯ್ಯ, “ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಪ್ರಾದೇಶಿಕ ಕಾಂಗ್ರೆಸ್‌ ವತಿಯಿಂದ ಮುಖ್ಯಮಂತ್ರಿ ಬಿಎಸ್‌ವೈ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಸರ್ಕಾರದ ಜೊತೆ ನಿಲ್ಲಬೇಕಾದದ್ದು ನಮ್ಮ ಕರ್ತವ್ಯ” ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ನಿಯೋಗದ ವರದಿಯಲ್ಲಿ ಏನಿದೆ?

1. ಕೊರೋನಾ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಆರ್ಥಿಕ ಸಹಾಯ ನೀಡಲು ಕೇಂದ್ರಕ್ಕೆ ಒತ್ತಾಯ ಮಾಡಿ

2. ಪ್ರತಿ 10 ಲಕ್ಷ ಜನರಲ್ಲಿ 10 ಸಾವಿರ ಜನರಿಗೆ ಟೆಸ್ಟ್ ಆಗಬೇಕಿದೆ, ಪ್ರತಿ ಜಿಲ್ಲೆಗೊಂದು ಟೆಸ್ಟಿಂಗ್ ಲ್ಯಾಬ್, ಟೆಸ್ಟಿಂಗ್ ಕಿಟ್ ನೀಡಿ, ಅಗತ್ಯ ವೈದ್ಯರು ನರ್ಸ್ ಗಳನ್ನು ಒದಗಿಸಿ.

3. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಅವಕಾಶ ಮಾಡಿಕೊಡಿ
ಕೊರೋನಾ ರೆಡ್ ಜೋನ್ ಭಾಗದಲ್ಲಿ ಸೀಲ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಿ.4. ಕೊರೋನಾ ವಿರುದ್ಧ ಹೋರಾಡುತ್ತಿರೋ ವೈದ್ಯರಿಗೆ ವಿಮಾ ಸೌಲಭ್ಯ ನೀಡಿರೋದು ಶ್ಲಾಘನೀಯ.

5. ಕೊರೋನಾ ವಿಚಾರದಲ್ಲಿ ಒಂದು ಧರ್ಮ, ಜಾತಿಯನ್ನ ಗುರಿಯಾಗಿಸಿಕೊಂಡು ಮಾಡುತ್ತಿರೋ ಆರೋಪಕ್ಕೆ ಅಪಪ್ರಚಾರಕ್ಕೆ ಬ್ರೇಕ್ ಹಾಕಿ.

6. ನಿಮ್ಮ ಪಕ್ಷದ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆ ಮಾಡ್ತಿದ್ದಾರೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಿ.

7. ಲಾಕ್ ಡೌನ್ ಅವಧಿಯಲ್ಲೂ ಸರ್ಕಾರದ ಆಹಾರದ ಕಿಟ್ ಮೇಲಿನ ಸರ್ಕಾರದ ಲೇಬಲ್ ತೆಗೆದು ಆಡಳಿತ ಪಕ್ಷದ ಶಾಸಕರು ತಮ್ಮ ಲೇಬಲ್ ಹಾಕಿ ವಿತರಣೆ ಮಾಡುತ್ತಿದ್ದಾರೆ  ಇಂತಹ ಕೃತ್ಯಕ್ಕೆ ಕೂಡಲೇ ಬ್ರೇಕ್ ಹಾಕಿ

8. ಸುಳ್ಳು ಸುದ್ದಿ ಹರಡುವ ಮೂಲಕ ಸಮಾಜದ ಶಾಂತಿ ಕದಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡ ಪೊಲೀಸ್ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಇದನ್ನು ಕೂಡಲೇ ವಾಪಾಸ್ ಪಡೆಯಿರಿ.

9. ಸರ್ಕಾರ ನೀಡುತ್ತಿರುವ ಅನುದಾನದಲ್ಲಿ ತಾರತಮ್ಯ ಎಸಗಲಾಗುತ್ತಿದ್ದು ಇದನ್ನು ಸರಿಪಡಿಸಿ.

10. ಕೊರೋನಾ ರೆಡ್ ಝೋನ್ ನಲ್ಲಿ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲನೆ ಮಾಡಿ

11. ಕೊರೋನಾ ವಿಮಾ ಸೌಲಭ್ಯವನ್ನು ಆಶಾ ಕಾರ್ಯಕರ್ತೆಯರು, ನರ್ಸ್ ಗಳು, ಪ್ಯಾರಾ ಮೆಡಿಕಲ್ ಸಿಬ್ಬಂದಿಗೂ ವಿಸ್ತರಣೆ ಮಾಡಿ.

12. ನಷ್ಟ ಅನುಭವಿಸಿದ ರೈತರಿಗೆ ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿ ಅಡಿಯಲ್ಲಿ ಪರಿಹಾರ ನೀಡಿ

13. ಹೊರ ರಾಜ್ಯಗಳ ಲಕ್ಷಾಂತರ ಜನ ಲಾಕ್ ಡೌನ್ ನಿಂದ ಸಮಸ್ಯೆಗೆ ಸಿಲುಕಿದ್ದಾರೆ, ಅವರನ್ನು ತಮ್ಮ ತಮ್ಮ ಊರುಗಳಿಗೆ ತೆರಳಲು ಅವಕಾಶ ಕಲ್ಪಿಸಿ.

14. ನರೇಗಾ ಯೋಜನೆಯ ಅಡಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ ಕಲ್ಪಿಸಿ.

15. ಅಸಂಘಟಿತ ವಲಯದ ವ್ಯಾಪಾರಸ್ಥರು, ಕುಶಲ ಕರ್ಮಿಗಳು, ಅರ್ಚಕರು, ಹಮಾಲಿಗಳು, ಅಡುಗೆ ಕೆಲಸದವರು, ಆಟೋ ಡ್ರೈವರ್ ಗಳು ಸೇರಿ ಇಂಥ ವರ್ಗದವರನ್ನು ವಿಶೇಷ ಪ್ಯಾಕೇಜ್ ರೂಪದಲ್ಲಿ ಲಾಕ್ ಡೌನ್ ಅವಧಿಯಲ್ಲಿ ಪ್ರತಿ ತಿಂಗಳು 10,000 ರೂ. ಹಣ ನೀಡಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.


Spread the love

About Laxminews 24x7

Check Also

ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ:ಮೋದಿ

Spread the love ಜೈಪುರ (ಏ.22): ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಮಾಡಲಿದೆ’ ಎಂಬ ಆ ಪಕ್ಷದ ಭರವಸೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ