Home / ಜಿಲ್ಲೆ / ದುಷ್ಕೃತ್ಯದಲ್ಲಿ ತೊಡಗಿರೋರನ್ನು ಗುರುತಿಸಿ ಕಠಿಣ ಶಿಕ್ಷೆ ನೀಡಿ: ಸಿದ್ದು

ದುಷ್ಕೃತ್ಯದಲ್ಲಿ ತೊಡಗಿರೋರನ್ನು ಗುರುತಿಸಿ ಕಠಿಣ ಶಿಕ್ಷೆ ನೀಡಿ: ಸಿದ್ದು

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಪಾದರಾಯನಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿಎಸ್‍ವೈ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಮಾಜಿ ಸಿಎಂ, ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಬರೆದು ಬಿಎಸ್‍ವೈ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ