ಬೆಂಗಳೂರು: ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಿಂದಾಗಿ ಅಬಕಾರಿ ಮತ್ತ ನೋಂದಣಿ ನಿಂತಿದೆ. ಈ ಸಂದರ್ಭದಲ್ಲಿ ಆರ್ಥಿಕವಾಗಿ ಸಂಪನ್ಮೂಲ ಕ್ರೂಢೀಕರಣ ಕಷ್ಟ. ಆದ್ರೂ ರಾಜ್ಯ ಸರ್ಕಾರ ಅನಗತ್ಯವಾಗಿ ಖರ್ಚು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ನಿಮಗ ಮತ್ತು ಮಂಡಳಿ ಅಧ್ಯಕ್ಷರ ನೇಮಕ ಆಗಿಲ್ಲ. ಆದರೂ ಅವರ ಹೆಸರಲ್ಲಿನ ಕಾರನ್ನ ನ ನ್ನ ಚೇರ್ಮನ್ ಎಂಜಾಯ್ ಮಾಡ್ತಿರುತ್ತಾನೆ. ಮೊದ್ಲು ಇಂತಹದ್ದಕ್ಕೆ ಕಡಿವಾಣ ಹಾಕಬೇಕು. ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲದ ರೀತಿ ಮಾಡಬೇಕು ಎಂದರು.
ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಜಿಎಸ್‌ಟಿ ಹಣ ಕೊಟ್ಟಿಲ್ಲ. ರಾಜ್ಯದಲ್ಲಿ ಆರ್ಥಿಕ ನಿರ್ವಹಣೆ ಮಾಡಲು ಅನುಭವದ ಕೊರತೆ ಇದೆ. ತೆರಿಗೆ ಸಂಗ್ರಹ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಜಿಎಸ್‌ಟಿ ನಿರ್ವಹಣೆ ಮಾಡಲು ಬಂದಿಲ್ಲ. ಅನಾವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕದಿರುವುದು. ಸರ್ಕಾರದಲ್ಲಿ ಭ್ರಷ್ಟಾಚಾರ ನಿಯಂತ್ರಿಸದಿರುವುದು ಆರ್ಥಿಕ ದಿವಾಳಿಗೆ ಕಾರಣವಾಗಿದೆ ಎಂದಿದ್ದಾರೆ.
ಇನ್ನು ಮೇ 3ರವರೆಗೂ ಲಾಕ್ ಡೌನ್ ಮುಂದುವರಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಲಾಕ್ ಡೌನ್ ಮುಂದುವರೆಸಿರೋದನ್ನ ವಿರೋಧ ಮಾಡುವುದಿಲ್ಲ. ಆದ್ರೆ ಮೋದಿ ಭಾಷಣ ರಾಜಕೀಯ ಭಾಷಣದಂತೆ ಇತ್ತು ಎಂದು ಟಾಂಗ್ ನೀಡಿದ್ರು.
ನಾವು ಕೊಟ್ಟ ಸಲಹೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ವೀಕರಿಸಿಲ್ಲ. ಲಾಕ್ ಡೌನ್ ಸಂಪೂರ್ಣವಾಗಿ ಯಶಸ್ವಿ ಮಾಡುವ ಕೆಲಸವನ್ನೂ ಸಹ ಮಾಡಲಿಲ್ಲ. ರೈತರಿಗೆ ತುಂಬ ನಷ್ಟ ಆಗುತ್ತಿದೆ, ಅದರ ಬಗ್ಗೆ ಕಾಳಜಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
Laxmi News 24×7