Breaking News

ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

Spread the love

ಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ, ಪ್ರಸಿದ್ಧ ಕೃಷ್ಣರಾಜಸಾಗರ  ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದೆ.

ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಡ್ಯಾಂಗೆ ಸದ್ಯ 7,531 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ನಿನ್ನೆ ಬೆಳಗ್ಗೆ ಕೇವಲ 5,734 ಕ್ಯೂಸೆಕ್ ಇದ್ದ ಒಳಹರಿವು, ಈಗ ಸುಧಾರಿಸಿರುವುದು ರೈತರಲ್ಲಿ ಸಂತಸ ತಂದಿದೆ.

124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಸದ್ಯ 81.55 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 49.452 ಟಿಎಂಸಿ ಆಗಿದ್ದು, ಸದ್ಯ 12.485 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ವೇಗವಾಗಿ ಹೆಚ್ಚಾಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಸಿಎಂ ಡಿಕೆಶಿ ನನ್ನನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡುವ ನಂಬಿಕೆ ಇದೆ: ಕೆ.ವೈ.ನಂಜೇಗೌಡ

Spread the loveಕೋಲಾರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೊಟ್ಟ ಮಾತಿನಂತೆ ನನಗೆ ಕೆಎಂಎಫ್  ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡುತ್ತಾರೆ ಎಂಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ