Breaking News

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ – ದಾಖಲೆಗಳು ಭಸ್ಮ

Spread the love

ರಾಯಚೂರು: ಲಿಂಗಸುಗೂರು ಪಟ್ಟಣದಲ್ಲಿನ ರೇಷ್ಮೆ ಇಲಾಖೆಯ ತಾಲೂಕು ಕಚೇರಿಯಲ್ಲಿ ಅಗ್ನಿ ಅವಘಡ  ಸಂಭವಿಸಿದ್ದು, ಕಟ್ಟಡ ಹೊತ್ತಿ ಉರಿದಿದೆ.

ಇಂದು (ಆ.22) ಬೆಳಗ್ಗೆ ಈ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕನೇ ಶನಿವಾರ ಸರ್ಕಾರಿ ರಜಾ ದಿನ ಹಿನ್ನೆಲೆ ಕಚೇರಿಗೆ ಬೀಗ ಹಾಕಲಾಗಿತ್ತು. ಈ ವೇಳೆ ಅಗ್ನಿ ಅವಘಡ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ಕಚೇರಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಪೀಠೋಪಕರಣಗಳು, ಕಂಪ್ಯೂಟರ್‌ಗಳು, ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂದು ಪತ್ತೆ ಹಚ್ಚಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವಾಲ್ಮೀಕಿ ನಿಗಮದಿಂದ ಹಿಡಿದು ರಸ್ತೆ ಗುಂಡಿ ಮುಚ್ಚೋಕೂ ಕೋಟ್ಯಂತರ ಹಣ ಲೂಟಿ – ಛಲವಾದಿ

Spread the loveಬೆಂಗಳೂರು: ವಾಲ್ಮೀಕಿ ನಿಗಮದಿಂದ  ಆರಂಭವಾಗಿ ಬೆಂಗಳೂರು ರಸ್ತೆ ಗುಂಡಿಗಳನ್ನ ತುಂಬಲು ಲಕ್ಷಾಂತರ ಕೋಟಿವರೆಗೆ ಲೂಟಿ ನಡೆಯುತ್ತಿದೆ. ಸಿಕ್ಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ