ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿಡಸೋಸಿ ರಸ್ತೆಯ ಆದರ್ಶ ನಗರದಲ್ಲಿರುವ ದೇವಸ್ಥಾನವೂಂದರ ಭವನದಲ್ಲೇ ಕುಳಿತು
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಅರ್ಜಿಗಳನ್ನು ಕೆಲ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ ಒ) ಭರ್ತಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪ್ರತಿಯೊಬ್ಬ ಮತದಾರರ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿ, ಅಗತ್ಯ ನಮೂನೆ ವಿತರಿಸಿ ಪರಿಶೀಲನೆ ನಡೆಸಬೇಕಾಗಿದೆ. ಆದರೆ ಕೆಲವು ಬಿಎಲ್ಒಗಳು ಮನೆಗಳಿಗೆ ತೆರಳುವ ಬದಲು ಸಾರ್ವಜನಿಕರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದು ಸಮುದಾಯ ಭವನದಲ್ಲೇ ನಮೂನೆಗಳು ಭರ್ತಿ ಮಾಡುತ್ತಿರುವ ಆರೋಪ ಕೇಳಿಬಂದಿದೆ.
Laxmi News 24×7