Breaking News
Home / new delhi / ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ

ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ

Spread the love

ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ.

‘2018ರ ಮಾರ್ಚ್‌ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ಯಲ್ಲಮ್ಮನಗುಡ್ಡದ ಅಭಿವೃದ್ಧಿ ಚಟುವಟಕೆಗಳಿಗೆ ವೇಗ ನೀಡಲು ನನಗೆ ಸರ್ಕಾರ ಅವಕಾಶ ಕೊಟ್ಟಿದೆ. ಹೆಚ್ಚಿನ ಅನುದಾನ ತಂದು ಪ್ರಗತಿಗೆ ಕ್ರಮ ವಹಿಸುವೆ’ ಎಂದು ಮಾಮನಿ ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಜಗದೀಶ್ ಶೆಟ್ಟರ್‌ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಬಾಲಚಂದ್ರ ಜಾರಕಿಹೊಳಿ

Spread the loveಬೆಳಗಾವಿ, : ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಇನ್ನುಳಿದ ಕ್ಷೇತ್ರಗಳಿಗೆ ಮೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ