Breaking News

ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವು

Spread the love

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾಯಚೂರಿನ  ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ.

18 ತಿಂಗಳ ಅನಂ ಬಲಿಯಾದ ಪುಟ್ಟ ಬಾಲಕಿ. ನಿದ್ದೆಯಿಂದ ಎದ್ದು ಹೊರಗಡೆ ಬಂದಿದ್ದ ಮಗು ಮನೆ ಮುಂದೆ ಆಟವಾಡುತ್ತಿತ್ತು. ಈ ವೇಳೆ ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಗುವನ್ನು ಎಳೆದಾಡಿ ಮನಬಂದಂತೆ ಕಚ್ಚಿವೆ. ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ