Breaking News

ಕೊಲೆಗೂ ಮುನ್ನ ಬೆಂಗಳೂರಿನಲ್ಲಿ ಕೇತನ್‌ ಕೈಕಾಲು ಮುರಿಸೋಕೆ ಪ್ಲ್ಯಾನ್ – ಚಾರ್ಜ್‌ಶೀಟ್‌ನಲ್ಲಿ ಸತ್ಯ ಬಯಲು

Spread the love

ಪುಣೆ: ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ  ತನಿಖೆಯಲ್ಲಿ ಹಲವು ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ. ಪುಣೆ ಪೊಲೀಸರು ಸಲ್ಲಿಸಿರುವ 5,053 ಪುಟಗಳ ಆರೋಪಪಟ್ಟಿಯಲ್ಲಿ, ಕೇತನ್‌ನನ್ನು ಕೊಲ್ಲುವ ಪ್ಲ್ಯಾನ್‌ಗೂ ಮುನ್ನ ಆತನ ಕೈಕಾಲು ಮುರಿಸಲು ಬೆಂಗಳೂರಿಗೆ ಕರೆತರುವ ಯೋಜನೆ ಮಾಡಲಾಗಿತ್ತು ಎಂದು ಉಲ್ಲೇಖಿಸಲಾಗಿದೆ.

ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ರಿತೇಶ್ ಹಾಂಗೆ ಬೆಂಗಳೂರಿನಲ್ಲಿರುವ ತನ್ನ ಸ್ನೇಹಿತನೊಂದಿಗೆ ಈ ಬಗ್ಗೆ ಚರ್ಚಿಸಿದ್ದ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಕೊಲೆಗೆ ಮುನ್ನ ಹಲವು ಪ್ಲ್ಯಾನ್
25 ವರ್ಷದ ಕೇತನ್ ಅಗರ್ವಾಲ್ ಅವರನ್ನು ಅವರ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿ ಪುಣೆಯ ಲೋಹಗಢ ಕೋಟೆಯಿಂದ ಕಂದಕಕ್ಕೆ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್‌ ವರದಿಯಲ್ಲಿ ತಿಳಿದುಬಂದಿದೆ. ಪ್ರಕರಣದಲ್ಲಿ ರಿತೇಶ್ ಹಾಂಗೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಕೇತನ್ ಮತ್ತು ಸಿಯಾ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನವೆಂಬರ್‌ನಲ್ಲಿ ಜೈಪುರದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ, ಸಿಯಾಗೆ ಕೇತನ್‌ನನ್ನು ಮದುವೆಯಾಗಲು ಇಷ್ಟವಿರಲಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಕೇತನ್‌ನನ್ನು ಕೊಲೆ ಮಾಡುವ ಮೊದಲು ಆತನನ್ನು ಬೆಂಗಳೂರಿಗೆ ಕರೆಸಿ ಕೈಕಾಲು ಮುರಿಸಬೇಕೆಂದು ಪ್ಲ್ಯಾನ್‌ ಮಾಡಲಾಗಿತ್ತು. ಚೇತನ್‌ ಸ್ನೇಹಿತ ರಿತೇಶ್ ಹಾಂಗೆ ಬೆಂಗಳೂರಿನಲ್ಲಿರುವ ತನ್ನ ಸ್ನೇಹಿತನೊಂದಿಗೆ ಈ ವಿಚಾರದ ಕುರಿತು ಮಾತುಕತೆ ಕೂಡ ಆಗಿತ್ತು. ಆದರೆ ಬೆಂಗಳೂರಿನಲ್ಲಿರುವ ಸ್ನೇಹಿತ ಈ ಪ್ಲ್ಯಾನ್‌ಗೆ ಒಪ್ಪಿಕೊಂಡಿರಲಿಲ್ಲ. ಅದಾದ ನಂತರ ಲೋಹಗಢಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡಲು ಫ್ಲ್ಯಾನ್‌ ಮಾಡಲಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ದಾಖಲಿಸಲಾಗಿದೆ.

ಕೊಲೆಯ ಯೋಜನೆ ರೂಪಿಸುವ ವೇಳೆ ಆರೋಪಿಗಳು ಕೊಲೆಗೆ ಸಂಬಂಧಿಸಿದ ಸಿನಿಮಾಗಳನ್ನು ವೀಕ್ಷಿಸಿದ್ದರು. ಅಲ್ಲದೆ, ಪೊಲೀಸರಿಂದ ಪತ್ತೆಯಾಗುವುದನ್ನು ತಪ್ಪಿಸುವ ಕುರಿತು ಪಾಡ್‌ಕಾಸ್ಟ್‌ಗಳನ್ನು ಕೇಳಿದ್ದರು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.


Spread the love

About Laxminews 24x7

Check Also

ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪನ

Spread the loveವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ  ತಾಲೂಕಿನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ರಾಷ್ಟ್ರೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ