Breaking News

ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳುವದರಿಂದ ಸದೃಢ ಆರೋಗ್ಯವಂತರಾಗಿ ಸನತ ಜಾರಕಿಹೊಳಿ

Spread the love

ಗೋಕಾಕ : ಪಠ್ಯದಷ್ಟೆ ಪತ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು.

ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳುವದರಿಂದ ಸದೃಢ ಆರೋಗ್ಯವಂತರಾಗಿ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆಗಳ ಮೂಲಕ ಪ್ರದರ್ಶಸಿಸುವ ಮುಖೇನ ಪ್ರೋತ್ಸಾಹಿಸಿಕೊಳ್ಳಿ. ಶಿಕ್ಷಣದೊಂದಿಗೆ ಉತ್ತಮ ಹವ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪರಿಪೂರ್ಣ ವ್ಯಕ್ತಿಗಳಾಗುತ್ತಿರಿ ವಿದ್ಯೆ ಜೀವನದ ದಾರಿದೀಪವಾಗಿದ್ದು, ಅದನ್ನು ಕಲ್ಪಿಸಿದ ಪಾಲಕರು, ಸಂಸ್ಥೆ ಹಾಗೂ ಶಿಕ್ಷಕರನ್ನು ಸದಾ ಸ್ಮರಿಸಿಕೊಳ್ಳುವಂತೆ ಕರೆ
ನೀಡಿದರು.

ವೇದಿಕೆ ಮೇಲೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ಆಡಳಿತಾಧಿಕಾರಿ ಬಿ.ಕೆ ಕುಲಕರ್ಣಿ, ಪ್ರಾಚಾರ್ಯ ಎಚ್.ಎಸ್.ಅಡಿಬಡ್ಡಿ ಉಪನ್ಯಾಸಕ ಪಿ.ಡಿ.ಪಂಚಾಳ, ಅಶ್ವಿನಿ ಮುನ್ನವಳ್ಳಿ ನಿರೂಪಿಸಿದರು, ಉಪನ್ಯಾಸಕಿ ಎಸ್.ಎಂ ಪಭನೂರಿ ಸ್ವಾಗತಿಸಿದರು, ಎಸ್.ಬಿ.ಕುಲಿಗೋಡ ವಂದಿಸಿದರು.


Spread the love

About Laxminews 24x7

Check Also

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂ. ಬಾಕಿ ಬರಬೇಕಿದೆ: ಶಾಸಕ ರಾಜು ಕಾಗೆ

Spread the loveಚಿಕ್ಕೋಡಿ: ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ನಿಗಮಕ್ಕೆ 900 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ. ಈ ಬಾಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ