Breaking News

ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಎಲ್ಲದಕ್ಕೂ ಉತ್ತರ ನೀಡವ ಅವಶ್ಯಕತೆ ಇಲ್ಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

Spread the love

 

ಗೋಕಾಕ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆಯುವುದು ಖಚಿತ. ಹೀಗಾಗಿ ಕಾಂಗ್ರೆಸ್‌ ಪಕ್ಷ ಕಳೆದ ಒಂದು ವರ್ಷದಿಂದಲೇ ಚುನಾವಣೆ ತಯಾರಿ ನಡೆಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

 

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಿಂದ ಕಳೆದ ಒಂದು ವರ್ಷದಲ್ಲಿ ಭಾರತ ಜೋಡೋ ಯಾತ್ರೆ, ಪ್ರಜಾಧ್ವನಿ ಯಾತ್ರೆ ಸೇರಿದಂತೆ 3ರಿಂದ 5 ಕಾರ್ಯಕ್ರಮಗಳು ಹಮ್ಮಿಕೊಂಡಿದ್ದು, ಈಗ ಮತ್ತೆ ವಿಧಾನಸಭಾ ಮತಕ್ಷೇತ್ರವಾರು ಬಸ್‌ ಯಾತ್ರೆ ನಡೆಯುತ್ತಿದೆ ಎಂದು ತಿಳಿಸಿದರು.

 

ಇನ್ನು ಕಾಂಗ್ರೆಸ್‌ ಪಕ್ಷದ ಬಗ್ಗೆ ರಾಜಕೀಯವಾಗಿ ಟೀಕೆ ಮಾಡುವ ಕುರಿತು ಮಾತನಾಡಿದ ಅವರು, ಚುನಾವಣೆ ಬಂದಾಗ ಟೀಕೆ, ಟಿಪ್ಪಣಿಗಳು ಮಾಡುವುದು ಸಹಜ. ಆದರೆ ಪ್ರತಿಯೊಂದು ಟೀಕೆ, ಟಿಪ್ಪಣಿಗಳಿಗೆ ಉತ್ತರ ನೀಡುವುದು ಅವಶ್ಯಕತೆ ಇಲ್ಲ ಎಂದರು.

ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಜಯಗಳಿಸಿದ್ದು, ಈ ಭಾರೀ ಗೆಲುವಿನ ಅಂತರ ಜಾಸ್ತಿ ಆಗುತ್ತದೆ. ಇದರಲ್ಲಿ ಯಾವುದೇ ಸಂದೇಹ ಬೇಡ. ನಾವು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಕಾರ್ಯಕರ್ತರು ಅಲರ್ಟ್‌ ಆಗಿದ್ದಾರೆ. ಫೆ. ಕೊನೆ ವಾರದಲ್ಲಿ ಕಾಂಗ್ರೆಸ್‌ ನಿಂದ ಅರ್ಧದಷ್ಟು ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಇದೇ ವೇಳೆ ತಿಳಿಸಿದರು.


Spread the love

About Laxminews 24x7

Check Also

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

Spread the love ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ