ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು.
ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ ಜೀ ಅವರನ್ನು ನೆನೆಯೋಣ, ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಠಿಣ ಪರಿಶ್ರಮ, ಸೃಜನಶೀಲತೆ ಹೊಂದಿರುವ ಎಲ್ಲಾ ಕುಶಲಕರ್ಮಿಗಳಿಗೆ ವಿಶ್ವಕರ್ಮ ಜಯಂತಿಯ ಶುಭ ಕೋರಿದರು.

ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಪ್ರತಿ ವಾರದಂತೆ ಈ ವಾರವು ಅನ್ನ ಸಂತರ್ಪಣೆ ಕಾರ್ಯವು ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಸಿದ್ದಯ್ಯ ಸ್ವಾಮಿಜೀ ಹಾಗೂ ರೈತರು , ಕಾರ್ಮಿಕರು ಉಪಸ್ಥಿತರಿದ್ದರು.
Laxmi News 24×7