Breaking News

ಬೆಂಗ್ಳೂರಿಂದ ಸಾಗರಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ – ತಪ್ಪಿದ ಭಾರೀ ಅನಾಹುತ

Spread the love

ಶಿವಮೊಗ್ಗ: ಬೆಂಗಳೂರಿಂದ ಸಾಗರಕ್ಕೆ  ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ ಹೊತ್ತಿ ಉರಿದ  ಘಟನೆ ಆನಂದಪುರ ಬಳಿಯ ಮುಂಬಾಳು ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು – ಹೊನ್ನಾವರ NH-206 ಮಾರ್ಗದಲ್ಲಿ ಬಸ್‌ ಸಂಚರಿಸುತ್ತಿತ್ತು. ಈ ವೇಳೆ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬಸ್‌ ಸುಟ್ಟು ಕರಕಲಾಗಿದೆ.‌

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಚಾಲಕ, ಹಾಗೂ ಕ್ಲೀನರ್‌ ತಕ್ಷಣ ಕೆಳಗಿಳಿಸಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದಿದ್ದರು. ಬಸ್‌ನಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಸಾಗರಕ್ಕೆ ತೆರಳುತ್ತಿದ್ದರು. ಹೆಚ್ಚಿನ ಪ್ರಯಾಣಿಕರಿದ್ದಿದ್ದರೆ ಅನಾಹುತ ಆಗುವ ಸಾಧ್ಯತೆ ಇತ್ತು.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಆನಂದಪುರ ಠಾಣೆ ಪಿಎಸ್‌ಐ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಕೇಸ್‌- ಸುಪ್ರೀಂನಲ್ಲೂ ದರ್ಶನ್‌ಗೆ ಬಿಗ್‌ ಶಾಕ್‌

Spread the loveನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ  ಮತ್ತೊಂದು ಭಾರಿ ಕಾನೂನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ