ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಜೋಗದ ಪ್ರಮುಖ ರಸ್ತೆಗಳಲ್ಲಿ ಚಿರತೆಯೊಂದು ಓಡಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ.
ಮಹಾತ್ಮ ಗಾಂಧಿ ಜಲವಿದ್ಯುತ್ ಕೇಂದ್ರಕ್ಕೆ ತೆರಳುವ ಮಾರ್ಗದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಎರಡು ದಿನದ ಹಿಂದೆ ರಸ್ತೆಯಲ್ಲಿ ಓಡಾಡುತ್ತಿದ್ದ ಚಿರತೆಯನ್ನು ನೋಡಿದ ಸ್ಥಳೀಯರು ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ.
ಈ ಹಿಂದೆ ಜೋಗದ ಸುತ್ತಮುತ್ತಲಿನ ಗ್ರಾಮಗಳಾದ ಶ್ರೀಪುರ, ಬಾಳೆಗದ್ದೆ, ಕೆಮ್ಮಣ್ಣುಗಾರು ಸೇರಿದಂತೆ ಅನೇಕ ಕಡೆ ಚಿರತೆ ಕಾಣಿಸಿಕೊಂಡಿತ್ತು. ಅಲ್ಲದೇ ಕಳೆದ 10 ದಿನಗಳಿಂದ ಚಿರತೆ ನಾಯಿಗಳನ್ನು ತಿಂದು ಹಾಕುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದೀಗ ರಸ್ತೆಯಲ್ಲಿ ಕಾಣಿಸಿಕೊಂಡಿರುವ ಚಿರತೆಯೇ ಗ್ರಾಮಗಳಲ್ಲಿ ಕಾಣಿಸಿಕೊಂಡಿರಬಹುದು ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.