Breaking News
Home / ಜಿಲ್ಲೆ / ಆಯುಷ್ ವೈದ್ಯರ, ಸ್ಟಾಫ್ ನರ್ಸ್ ಗಳ ವೇತನ ಹೆಚ್ಚಳ ಮಾಡಿ: ಆಯನೂರು ಮಂಜುನಾಥ್.

ಆಯುಷ್ ವೈದ್ಯರ, ಸ್ಟಾಫ್ ನರ್ಸ್ ಗಳ ವೇತನ ಹೆಚ್ಚಳ ಮಾಡಿ: ಆಯನೂರು ಮಂಜುನಾಥ್.

Spread the love

ಶಿವಮೊಗ್ಗ : ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಮ್ಮದೇ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.

ನಗರದಲ್ಲಿ ಇಂದು ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೊರೊನಾ ಸೋಂಕಿನ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿ ತಮ್ಮ ಜೀವವನ್ನು ಒತ್ತೆ ಇಟ್ಟು ಶ್ರಮದಿಂದ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ಸರ್ಕಾರ ಕೇವಲ ಎಂಬಿಬಿಎಸ್ ವೈದ್ಯರ ವೇತನವನ್ನು ಹೆಚ್ಚಳ ಮಾಡಿದೆ, ಅದನ್ನು ನಾನು ಸ್ವಾಗತ ಮಾಡುತ್ತೇನೆ. ಆದರೆ ಇವರಷ್ಟೇ ಕೆಲಸ ನಿರ್ವಹಿಸುವ ಆಯುಷ್ ವೈದ್ಯರಿಗೆ, ಸ್ಟಾಫ್ ನರ್ಸ್ ಗಳಿಗೆ ಮಾತ್ರ ಹೆಚ್ಚಳ ಮಾಡಿಲ್ಲ ಯಾಕೆ ಎಂದು ಪ್ರಶ್ನಿಸಿದರು.

ಸರ್ಕಾರವೇ ಈ ರೀತಿ ತಾರತಮ್ಯ ಮಾಡಿದರೇ ಇವರು ಯಾರ ಬಳಿ ನ್ಯಾಯ ಕೇಳಬೇಕು ಎಂದು ಎಂಎಲ್ ಸಿ ಆಯನೂರು ಮಂಜುನಾಥ್ ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೇ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳ ಮಾಡಿದಂತೆ ಆಯುಷ್ ವೈದ್ಯರು ಹಾಗೂ ಸ್ಟಾಪ್ ನರ್ಸ್ ಗಳ ವೇತನವನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’

Spread the love ಗದಗ : ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’ (ವೈಮಾನಿಕ ಭೂ ಸಮೀಕ್ಷೆ)ಗೆ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ