Breaking News

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

Spread the love

ವಿಧಾನಸೌಧ, ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣೆಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ ಹೋರಾಟ ಮಾಡುತ್ತಿದ್ದರು. ಯಾಕೆ ಈಗ ಮಾತಾಡುತ್ತಿಲ್ಲ, ಎಲ್ಲಿ ಕಾಣೆಯಾಗಿದ್ದಾರೆ ಎಂದು ಪ್ರಶ್ನಿಸಿದರು.

ಈಗ ಯುದ್ಧ ನಡೆಯುತ್ತಿದ್ದು, ಇದರಿಂದ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಬೆಲೆ ಏರಿಕೆಯಾಗುತ್ತಿದೆ. ಈಗಷ್ಟೇ ಸಂಕಷ್ಟ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಗ್ರಾಹಕರ ಹಾಗೂ ಹೋಟೆಲ್‌ ನವರ ಹಿತದೃಷ್ಟಿಯನ್ನು ಕಾಪಾಡಬೇಕು ಎಂದು ಸಚಿವರು ಹೇಳಿದರು.

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ. ಇಂದಿನ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಲಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಡಿ.ಕೆ.ಶಿವಕುಮಾರ್‌ ಅವರ ಕನಸಾಗಿತ್ತು. ಅವರ ಕನಸು ನನಸಾಗಿದೆ. ಮುಂದಿನದ್ದು ಏನೇ ಇದ್ದರೂ ಹೈಕಮಾಂಡ್‌ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ