Breaking News

ಎರಡು ತಲೆ ಹಾವು ಮಾರಾಟ ಮಾಡುತ್ತಿದ್ದವರರು ಅಂದರ್

Spread the love

ಬೆಂಗಳೂರು, ಏ.23- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 60 ಲಕ್ಷ ಮೌಲ್ಯವಿರುವ ಎರಡು ತಲೆ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಒಂದು ಎರಡು ತಲೆ ಹಾವು, ದ್ವಿಚಕ್ರ ವಾಹನ, ಮೂರು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಹೊಸ ಗುರಪ್ಪನಪಾಳ್ಯದ ಮಹಮ್ಮದ್ ರಿಜ್ವಾನ್ (26) ಹಾಗೂ ಅಜರ್‍ಖಾನ್ (27) ಬಂಧಿತ ಆರೋಪಿಗಳು.ಆರೋಪಿಗಳು ಸಾರಕ್ಕಿ ಸರ್ಕಲ್‍ನ ಬಸಪ್ಪ ಗಾರ್ಡನ್‍ನಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಎರಡು ತಲೆ ಹಾವನ್ನು ಇಟ್ಟುಕೊಂಡು ನಿಂತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿಗಿಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ವಿಚಾರಣೆಗೊಳಪಡಿಸಿದಾಗ ಮಹಮ್ಮದ್ ರಿಜ್ವಾನ್ ಡಂಜೋ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಲಾಕ್‍ಡೌನ್ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಎರಡು ತಲೆ ಹಾವು ಮಾರಾಟಕ್ಕೆ ಇಳಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 50 ರಿಂದ 60 ಲಕ್ಷ ಬೆಲೆ ಇರುವ ಎರಡು ತಲೆ ಹಾವುಗಳನ್ನು ಡಂಜೋ ಕಂಪೆನಿಯ ಬ್ಯಾಗ್‍ನಲ್ಲಿಟ್ಟುಕೊಂಡು ಮಾರಾಟ ಮಾಡಲು ಆರೋಪಿಗಳು ಯತ್ನಿಸುತ್ತಿದ್ದರು. ಬಂಧಿತರ ವಿರುದ್ಧ ಕಗ್ಗಲಿಪುರದ ವಲಯ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದು, ಪ್ರಕರಣದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ