Breaking News

ದಾಂಡೇಲಿ ಬಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿತ; ಸಿಬ್ಬಂದಿ ಸಾವು

Spread the love

ಕಾರವಾರ: ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ನಡೆಯುತಿದ್ದ ವೇಳೆ ಏಕಾಏಕಿ ಮಣ್ಣು ಕುಸಿದು ರೈಲ್ವೆ ಇಲಾಖೆಯ ತಾಂತ್ರಿಕ ಉದ್ಯೋಗಿಯೊಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಇನ್ನೋರ್ವ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ  ಜಿಲ್ಲೆಯ ದಾಂಡೇಲಿ ಬಳಿ ನಿನ್ನೆ ತಡರಾತ್ರಿ ನಡೆದಿದೆ.

ಅಳ್ನಾವರ-ಅಂಬೇವಾಡಿ ಸೆಕ್ಷನ್‌ನ ಎಲ್‌ಸಿ ನಂ.11 ರಲ್ಲಿ ದಾಂಡೇಲಿ ತಾಲೂಕಿನ ಕರ್ಕಾ – ಬರ್ಚಿ ರೈಲ್ವೆ ಮಾರ್ಗದಲ್ಲಿ ಅಂಡರ್ ಬ್ರಿಡ್ಜ್ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ತೆಗೆದು ಹಾಕಿದ್ದ ಮಣ್ಣು ಕುಸಿದಿದೆ. ಈ ಸಂದರ್ಭದಲ್ಲಿ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿ ಹಾಗೂ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಾಲವಾಡಗಿ ಗ್ರಾಮದ ನಿವಾಸಿ ಮಹೇಶ ಶೇಖಪ್ಪ ತಳವಾರ (33) ಅವರ ಮೇಲೆ ಮಣ್ಣು ಬಿದ್ದ ಪರಿಣಾಮವಾಗಿ ಮಣ್ಣಿನಲ್ಲಿ ಸಿಲುಕಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಸ್ಥಳದಲ್ಲಿದ್ದ ರೈಲ್ವೆ ಇಲಾಖೆಯ ಸೀನಿಯರ್‌ ಸೆಕ್ಷೆನ್‌ ಇಂಜಿನಿಯರ್ ಮಕ್ತುಂ ಹುಸೇನ್ ಮಹಮ್ಮದ್ ಹುಸೇನ್ ಮುಲ್ಲಾ (57) ಎಂಬವರಿಗೆ ಗಂಭೀರ ಗಾಯವಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಶಿವಾನಂದ ಅಂಬಿಗೇರ್ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಾಯಗೊಂಡ ಸಿಬ್ಬಂದಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಂಗ್ಳೂರು ಸರಣಿ ಹತ್ಯೆ ಕೇಸ್ – ನರಹಂತಕ ಇಂದುಶೇಖರ್ 14 ದಿನ ಪೊಲೀಸ್‌ ಕಸ್ಟಡಿಗೆ

Spread the loveಬೆಂಗಳೂರು: ನಗರದಲ್ಲಿ  ನಡೆದ ಸರಣಿ ಹತ್ಯೆ ಪ್ರಕರಣದ ಆರೋಪಿ ಇಂದುಶೇಖರ್‌ನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ