Breaking News

ತರಬೇತಿ ಸಮಯದಲ್ಲಿ ತಲೆಗೆ ಪೆಟ್ಟು ಬಿದ್ದು ಯೋಧ ಸಾವು

Spread the love

ಧಾರವಾಡ, ಫೆ.24-ಭಾರತೀಯ ಸೇನೆಯ ತರಬೇತಿಯ ಸಮಯದಲ್ಲಿ ತಲೆಗೆ ಬಲವಾದ ಏಟು ಬಿದ್ದು, ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗಪುರ ಸೇನಾ ಕ್ಯಾಂಪ್‍ನಲ್ಲಿ ನಡೆದಿದೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದ ಮಹೇಶ್ ಸಿಂಗನಹಳ್ಳಿ (20) ಮೃತಪಟ್ಟ ಯೋಧ.

ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಸೇನೆಗೆ ಸೇರಿದ್ದ ಇವರು ತಂದೆ-ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯನ್ನು ಅಗಲಿದ್ದಾರೆ. ಇಂದು ಯೋಧನ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ಯೋಧನ ಅಗಲಿಕೆಯಿಂದ ಗ್ರಾಮದಲ್ಲಿ ನೀರವ ಮೌನ ಮನೆ ಮಾಡಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ