Breaking News

ಗಂಡ ಹೆಂಡತಿಯ ಜಗಳ ಬಿಡಿಸಲು ಹೋಗಿ ಮಗ ಬಲಿ – ಹಾರೆಕೋಲಿನಿಂದ ಹೊಡೆದು ಕೊಂದ ತಂದೆ

Spread the love

ತುಮಕೂರು: ಗಂಡ ಹೆಂಡತಿ ಜಗಳ ಬಿಡಿಸಲು ಹೋದ ಮಗನನ್ನೇ ತಂದೆ ಬರ್ಬರವಾಗಿ  ಕೊಲೆ ಮಾಡಿರುವ ಘಟನೆ ಕುಣಿಗಲ್ ತಾಲ್ಲೂಕಿನ ಚೌಡನಾಯಕನಪಾಳ್ಯ ಗ್ರಾಮದಲ್ಲಿ ನಡೆದಿದೆ.

16 ವರ್ಷದ ಸುನೀಲ್‌ ಕೊಲೆಯಾದ ಹುಡುಗ. ತಂದೆ ನಂಜೆಗೌಡ ಮಧ್ಯ ವ್ಯಸನಿಯಾಗಿದ್ದು, ಕುಡಿದು ಬಂದು ಪತ್ನಿ ರಂಜಿತಾಳೊಂದಿಗೆ ಆಗಾಗ ಜಗಳವಾಡುತ್ತಿದ್ದ. ಇದೇ ಕಾರಣಕ್ಕೆ ಈ ಹಿಂದೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲಿಗೆ ಹೋಗಿ ಬಂದಿದ್ದ.

ನಂಜೆಗೌಡ ಇಂದು ಬೆಳಗ್ಗೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದಾಗ, ಜಗಳ ತಾರಕಕ್ಕೇರಿ ರಂಜಿತಾ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಆಗ ಸುನೀಲ್ ಮಧ್ಯ ಪ್ರವೇಶಿಸಿ ಅವರ ಜಗಳ ಬಿಡಿಸಲು ಮುಂದಾಗಿದ್ದಾನೆ

ಈ ವೇಳೆ ಕೊಪಗೊಂಡ ನಂಜೆಗೌಡ ಪತ್ನಿಯನ್ನು ಮನೆಯಿಂದ ಆಚೆಗೆ ತಳ್ಳಿ ಬಾಗಿಲು ಹಾಕಿಕೊಂಡು ಮನೆಯಲ್ಲಿದ್ದ ಹಾರೆಕೋಲಿನಿಂದ ಮಗನ ಮೇಲೆ ಮನ ಬಂದಂತೆ ಹಲ್ಲೆ ನಡೆಸಿ ಕೊಲೆಗೈದು ವಿಕೃತಿ ಮೆರೆದಿದ್ದಾನೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುಣಿಗಲ್ ಸಿಪಿಐ ಮಾಧ್ಯನಾಯಕ್ ಅವರು ನಂಜೆಗೌಡನನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ, ಭಾನುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ