Breaking News

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Spread the love

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು ಮಗನೇ ಕೊಲೆ ಮಾಡಿರುವ ಘಟನೆ ಆರ್‌ಆರ್ ನಗರ  ಬೆಮಲ್ ಲೇಔಟ್‌ನಲ್ಲಿ ನಡೆದಿದೆ.

ಸಾವಿತ್ರಮ್ಮ (72) ಕೊಲೆಯಾದ ದುರ್ದೈವಿ. ಮಗ ವೆಂಕಟೇಶ್ ವೃದ್ಧ ತಾಯಿಯನ್ನ ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಸ್ಟ್ರೋಕ್ ಹೊಡೆದ ಕಾರಣ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ತಾಯಿ ಅವಸ್ಥೆಯಿಂದ ನೊಂದಿದ್ದ ಮಗ ಕಟ್ಟಡದ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾನೆ.

ಘಟನಾ ಸ್ಥಳಕ್ಕೆ ಆರ್‌ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮಗ ವೆಂಕಟೇಶ್‌ನನ್ನ ಆರ್‌ಆರ್ ನಗರ ಪೊಲೀಸರು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ