Breaking News

ತಾಯಂದಿರ ದಿನವೇ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ

Spread the love

ಉತ್ತರ ಪ್ರದೇಶ: ಆಸ್ತಿ ವಿಚಾರವಾಗಿ ನಡೆದ ಜಗಳದಲ್ಲಿ ಮಗನೇ ತನ್ನ ತಾಯಿ ಮತ್ತು ತಮ್ಮನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಯನ್ನು ರಾಜ್‌ಕಿಶೋರ್ ಗುಪ್ತಾ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಮನೆಯೊಳಗೆ ಗುಂಡಿನ ಸದ್ದು ಕೇಳಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಘಟನೆ ಬಹಿರಂಗವಾಗಿದೆ.

ಕುಟುಂಬದ ಪಿತ್ರಾರ್ಜಿತ ಆಸ್ತಿಯನ್ನು ಆರೋಪಿಯ ತಂದೆ ಮಾರಾಟ ಮಾಡಿದ್ದರು. ಆದರೆ ಈ ವಿಚಾರಕ್ಕೆ ರಾಜ್‌ಕಿಶೋರ್ ವಿರೋಧ ವ್ಯಕ್ತಪಡಿಸಿದ್ದ. ಇದೇ ವಿಷಯವಾಗಿ ಮನೆಯಲ್ಲಿ ತಾಯಿ ಮತ್ತು ತಮ್ಮನೊಂದಿಗೆ ಜಗಳ ನಡೆದಿದೆ.

ಜಗಳ ತೀವ್ರವಾಗುತ್ತಿದ್ದಂತೆ ಆರೋಪಿ ಬಂದೂಕು ತೆಗೆದು ತಾಯಿ ಮತ್ತು ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿಯನ್ನು ಬಂಧಿಸಲು ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯ ಸರ್ಕಾರದ ನಡೆ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನಾನು ಪರಿಸ್ಥಿತಿಗೆ ಒಳಗಾಗಿ ರಾಜೀನಾಮೆ ನೀಡಿದ್ದೇನೆ.

Spread the loveಹುಬ್ಬಳ್ಳಿ: “ರಾಜ್ಯ ಸರ್ಕಾರದ ನಡೆ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನಾನು ಪರಿಸ್ಥಿತಿಗೆ ಒಳಗಾಗಿ ರಾಜೀನಾಮೆ ನೀಡಿದ್ದೇನೆ. ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ