ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನಿಯಾ ಗಾಂಧಿ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಭಾನುವಾರ ಸಂಜೆ 7 ಗಂಟೆಗೆ ಅವರನ್ನು ಸೆಂಟ್ರಲ್ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋನಿಯಾ ಅವರ ಜೊತೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಕೂಡ ಆಸ್ಪತ್ರೆಯಲ್ಲಿ ಇದ್ದಾರೆ. ಸೋನಿಯಾ ಅವರಿಗೆ ರೂಟಿನ್ ಚೆಕಪ್ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲುತ್ತಿದ್ದು, ಶನಿವಾರ ನಡೆದ ಬಜೆಟ್ ಅಧಿವೇಶನದಲ್ಲೂ ಭಾಗಿಯಾಗಿರಲಿಲ್ಲ.
Laxmi News 24×7