Breaking News

ಸೌಜನ್ಯ ಕೊಲೆ ಕೇಸ್‌ – ಶಶಿಕುಮಾರ್ ನೇತೃತ್ವದಲ್ಲಿ ಎಸ್‌ಐಟಿ ರಚನೆ

Spread the love

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಹುಚರ್ಚಿತ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ನಿರ್ದೇಶನದ ಮೇರೆಗೆ ಪ್ರಕರಣದ ಮರುತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು  ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಐಜಿಪಿ ಎನ್. ಶಶಿಕುಮಾರ್  ಅವರ ನೇತೃತ್ವದಲ್ಲಿ ಈ ವಿಶೇಷ ತನಿಖಾ ದಳ ಕಾರ್ಯನಿರ್ವಹಿಸಲಿದ್ದು, ತಂಡದಲ್ಲಿ ಅನುಭವಿ ಉನ್ನತ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್‌ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್, ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರಿದ್ದಾರೆ.

2012ರಲ್ಲಿ ನಡೆದ ಈ ಭೀಕರ ಕೃತ್ಯದ ತನಿಖೆಯನ್ನು ಈ ಹಿಂದೆ ಸಿಬಿಐ ನಡೆಸಿತ್ತಾದರೂ, ಏಕೈಕ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ನೈಜ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಹಾಗೂ ಸಮಗ್ರ ತನಿಖೆ ನಡೆಯಬೇಕು ಎಂದು ಸೌಜನ್ಯ ಅವರ ತಾಯಿ ಕುಸುಮಾವತಿ ಹಾಗೂ ಹೋರಾಟಗಾರರು ನಿರಂತರವಾಗಿ ನಡೆಸಿದ ಕಾನೂನು ಹೋರಾಟದ ಫಲವಾಗಿ ಸುಪ್ರೀಂಕೋರ್ಟ್ ಮರುತನಿಖೆಗೆ ನಿರ್ದೇಶನ ನೀಡಿತ್ತು.

ನ್ಯಾಯಾಲಯದ ಆದೇಶ ಪಾಲಿಸಿರುವ ರಾಜ್ಯ ಸರ್ಕಾರ, ಪ್ರಕರಣದ ನಿಷ್ಪಕ್ಷಪಾತ ಮತ್ತು ಆಳವಾದ ತನಿಖೆಗಾಗಿ ಐಪಿಎಸ್ ಅಧಿಕಾರಿಗಳ ಈ ಪ್ರಬಲ ತಂಡವನ್ನು ರಚಿಸಿದೆ.


Spread the love

About Laxminews 24x7

Check Also

ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ, ಭಾನುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ