Breaking News

ಸೌಜನ್ಯಳ ತಾಯಿ ಕುಸುಮಾವತಿ, ಯಾವುದೇ ಅನುಮಾನವಿಲ್ಲ: ಸುಧೀರ್‌ ಕುಮಾರ್‌ ರೆಡ್ಡಿ

Spread the love

ಮಂಗಳೂರು: ಕುಸುಮಾವತಿ ಅವರು ಸೌಜನ್ಯಳ ತಾಯಿಯೇ ಅಲ್ಲವೇ ಎಂಬ ಬಗ್ಗೆ ನಮಗೆ ಯಾವುದೇ ರೀತಿಯ ಅನುಮಾನಗಳಿಲ್ಲ ಎಂದು ವಿಶೇಷ ತನಿಖಾ ತಂಡ ತಂಡದ ಹಿರಿಯ ಅಧಿಕಾರಿ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಧರ್ಮಸ್ಥಳದ ಗ್ರಾಮಸ್ಥ ಕಿಶೋರ್ ಎಂಬುವವರು ಕುಸುಮಾವತಿ ಅವರು ಸೌಜನ್ಯಳ ನಿಜವಾದ ತಾಯಿಯೇ ಎಂಬ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಎಸ್‌ಐಟಿಗೆ ದೂರು ಸಲ್ಲಿಸಿದ್ದರು.

ದೂರು ಹಾಗೂ ಈ ಕುರಿತು ಪ್ರಕಟವಾದ ಮಾಧ್ಯಮ ವರದಿಗಳಿಗೆ ಪ್ರತಿಕ್ರಿಯಿಸಿದ ಸುಧೀರ್ ಕುಮಾರ್ ರೆಡ್ಡಿ, ಸೌಜನ್ಯ ಮತ್ತು ಆಕೆಯ ತಾಯಿ ಕುಸುಮಾವತಿ ಅವರ ಸಂಬಂಧದ ವಿಚಾರದಲ್ಲಿ ತನಿಖಾ ತಂಡಕ್ಕೆ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದ್ದಾರೆ.

ಎಸ್‌ಐಟಿ ತನ್ನ ನಿಯೋಜಿತ ತನಿಖಾ ವ್ಯಾಪ್ತಿಯನ್ನು ಮೀರಿ ಹೋಗುವುದಿಲ್ಲ. ಮೂಲ ಪ್ರಕರಣಕ್ಕೆ ಸಂಬಂಧವಿಲ್ಲದ ಅಥವಾ ಅಪ್ರಸ್ತುತವಾದ ವಿಚಾರಗಳ ತನಿಖೆಗೆ ಕೈಹಾಕುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇಂತಹ ಸ್ಥಳೀಯ ವಿವಾದಗಳು, ಅನುಮಾನಗಳು ಅಥವಾ ದೂರುಗಳೇನಾದರೂ ಇದ್ದರೆ, ಅವುಗಳನ್ನು ಆಯಾ ವ್ಯಾಪ್ತಿಯ ಸ್ಥಳೀಯ ಪೊಲೀಸರೇ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ