Breaking News

ಧಾರವಾಡ–ಪಂಢರಪುರ ನಡುವೆ ವಿಶೇಷ ರೈಲು: ಬೆಳಗಾವಿ ಜನರಿಗೆ ಅನುಕೂಲ

Spread the love

ಬೆಳಗಾವಿ: ಏಕಾದಶಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆ ಧಾರವಾಡ ಮತ್ತು ಪಂಢರಪುರ ನಡುವೆ ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 07339/07340 ಧಾರವಾಡ–ಪಂಢರಪುರ–ಧಾರವಾಡ ವಿಶೇಷ ರೈಲು ನವೆಂಬರ್ 20, 21 ಮತ್ತು 22ರಂದು ಎರಡೂ ಮಾರ್ಗಗಳಲ್ಲಿ ಸಂಚರಿಸಲಿದೆ. ಒಟ್ಟು ಮೂರು ಟ್ರಿಪ್‌ಗಳ ಸೇವೆ ಲಭ್ಯವಾಗಲಿದೆ.

ರೈಲು ಸಂಖ್ಯೆ 07339 ಧಾರವಾಡದಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಅದೇ ದಿನ ಸಂಜೆ 4 ಗಂಟೆಗೆ ಪಂಢರಪುರ ತಲುಪಲಿದೆ. ವಾಪಸ್ ರೈಲು ಸಂಖ್ಯೆ 07340 ಪಂಢರಪುರದಿಂದ ರಾತ್ರಿ 7 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 3.15ಕ್ಕೆ ಧಾರವಾಡ ತಲುಪಲಿದೆ.

ಈ ರೈಲು ಅಳ್ನಾವರ, ಲೋಂಡಾ, ಖಾನಾಪುರ, ದೇಸೂರು, ಬೆಳಗಾವಿ, ಪಾಚ್ಚಾಪುರ, ಗೋಕಾಕ್ ರೋಡ್, ಘಟಪ್ರಭಾ, ಚಿಕ್ಕೋಡಿ ರೋಡ್, ರಾಯಬಾಗ, ಚಿಂಚಲಿ, ಕುಡಚಿ, ಉಗಾರ ಖುರ್ದ್, ಶೇಡಬಾಳ, ವಿಜಯನಗರ, ಮಿರಜ್ ಸೇರಿದಂತೆ ಮಾರ್ಗಮಧ್ಯದ ಹಲವು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಒಟ್ಟು 10 ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲು ಸೇವೆಯಿಂದ ಏಕಾದಶಿ ಹಬ್ಬಕ್ಕೆ ಪಂಢರಪುರಕ್ಕೆ ತೆರಳುವ ಭಕ್ತರು ಹಾಗೂ ಪ್ರಯಾಣಿಕರಿಗೆ ಅನುಕೂಲವಾಗಲಿದೆ.


Spread the love

About Laxminews 24x7

Check Also

ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ, ವ್ಯವಸ್ಥೆಯೊಳಗೇ ಹೋರಾಟ: ರಾಹುಲ್ ಗಾಂಧಿ

Spread the loveನವದೆಹಲಿ: ವಿರೋಧ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ. ಬದಲಾಗಿ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕವೇ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ